ರಾಯಚೂರು: ಜೂನ್ 21 ರಂದು ಸಚಿವ ಎನ್.ಎಸ್. ಬೋಸರಾಜು ಅವರಿಗೆ ಅಭಿನಂದನೆ, ʼಚೈತನ್ಯಸಾಗರʼ ಗ್ರಂಥ ಬಿಡುಗಡೆ ಕಾರ್ಯಕ್ರಮ

ರಾಯಚೂರು: ಎನ್.ಎಸ್. ಬೋಸರಾಜು ಅವರ 79ನೇ ಜನ್ಮದಿನೋತ್ಸವ, ಅಭಿನಂದನೆ ಹಾಗೂ 'ಚೈತನ್ಯ ಸಾಗರ' ಗ್ರಂಥ ಲೋಕಾರ್ಪಣಾ ಸಮಾರಂಭ ಜೂನ್ 21ರಂದು ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಹಂಪಯ್ಯ ಸಾಹುಕಾರ ಹೇಳಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್.ಎಸ್.ಬೋಸರಾಜು ಅವರಿಗೆ ಅಭಿನಂದನೆ ಹಾಗೂ 'ಚೈತನ್ಯ ಸಾಗರ' ಗ್ರಂಥ ಲೋಕಾರ್ಪಣಾ ಸಮಾರಂಭದ ಅಧ್ಯಕ್ಷತೆ ಸ್ಪೀಕರ್ ಯು.ಟಿ. ಖಾದರ್ ವಹಿಸಲಿದ್ದಾರೆ. ಸಚಿವ ಎಚ್.ಕೆ. ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ತೆಲಂಗಾಣದ ಡಿಸಿಎಂ ಮಲ್ಲು ಭಟ್ಟಿ ವಿಕ್ರಮಾರ್ಕ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದು, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ.
Next Story





