ನಿಗಮ-ಮಂಡಳಿ ನೇಮಕಾತಿ ಪಟ್ಟಿ ಪ್ರಕಟ : ಬಸನಗೌಡ ದದ್ದಲ್‌ಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ, ಹಂಪನಗೌಡ ಬಾದರ್ಲಿಗೆ ಉಗ್ರಾಣ ನಿಗಮದ ಹೊಣೆ

ರಾಯಚೂರು: ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನ ಹಾಗೂ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಪಟ್ಟಿ ಕಳುಹಿಸಿದ್ದರು. ಇದೀಗ ಹೈಕಮಾಂಡ್ ಅಧ್ಯಕ್ಷರ ಪಟ್ಟಿಗೆ ಕೊನೆಗೂ ಒಪ್ಪಿಗೆ ಸೂಚಿಸಿದೆ.
ಸಚಿವ ಸ್ಥಾನದಿಂದ ವಂಚಿತವಾಗಿದ್ದ ರಾಯಚೂರು ಜಿಲ್ಲೆಗೆ ರಾಜ್ಯ ಸರ್ಕಾರ ಎರಡು ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳನ್ನು ನೀಡುವ ಮೂಲಕ ಸ್ವಲ್ಪ ಸಮಾಧಾನಪಡಿಸಿದೆ ಎನ್ನಲಾಗುತ್ತಿದೆ.
ಹಂಪನಗೌಡ ಬಾದರ್ಲಿ ಅವರು ಸಿಂಧನೂರು ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೆ, ಬಸನಗೌಡ ದದ್ದಲ್ ಎರಡು ಬಾರಿ ಶಾಸಕರಾಗಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತರಾಗಿದ್ದ ಈ ಇಬ್ಬರು ನಾಯಕರು, ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸಂಪುಟ ರಚನೆಯ ಸಂದರ್ಭದಲ್ಲಿಯೂ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಸಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿತ್ತು. ಇದೀಗ ಇಬ್ಬರಿಗೂ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಲಭಿಸಿರುವುದು ಗಮನಾರ್ಹವಾಗಿದೆ.




