Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಈಶಾನ್ಯ ಶಿಕ್ಷಕರ ಕ್ಷೇತ್ರದ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ 2,500 ನಕಲಿ ಮತದಾರರ ಸೃಷ್ಟಿ: ಎಂಎಲ್ ಸಿ ವಸಂತ ಕುಮಾರ ಆರೋಪ

ವಾರ್ತಾಭಾರತಿವಾರ್ತಾಭಾರತಿ22 Oct 2026 4:26 PM IST
share
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ 2,500 ನಕಲಿ ಮತದಾರರ ಸೃಷ್ಟಿ: ಎಂಎಲ್ ಸಿ ವಸಂತ ಕುಮಾರ ಆರೋಪ

ರಾಯಚೂರು: ಕೇಂದ್ರದ ಬಿಜೆಪಿ ಸರಕಾರ ಎಂಎಲ್ ಸಿ ಚುನಾವಣೆಯಲ್ಲಿಯೂ ಮತಕಳ್ಳತನ, ಅನರ್ಹರನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ ಮತ ಹಾಕಿಸುವ ಹುನ್ನಾರ ನಡೆಸುತ್ತಿದ್ದು, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಸುಮಾರು 2500 ಅಕ್ರಮ, ನಕಲಿ ಮತದಾರರನ್ನು ಸೃಷ್ಠಿ ಮಾಡಿದೆ. ಈ ಕುರಿತು ಚುನಾವಣೆ ಇಲಾಖೆಗೆ ದೂರು ನೀಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.ವಸಂತ ಕುಮಾರ ಗಂಭೀರ ಆರೋಪ ಮಾಡಿದರು.

ಗುರುವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಎ.ವಸಂತ ಕುಮಾರ, ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಶಶಿಲ್ ನಮೋಶಿ ಅವರು ಹೆಚ್ ಕೆಇ ಸೊಸೈಟಿ ಅಧ್ಯಕ್ಷರಾಗಿದ್ದಾರೆ. ಕಲಬುರಗಿ, ರಾಯಚೂರು ಹಾಗೂ ಬೀದರ್ ನಲ್ಲಿ ಅವರ ಶಿಕ್ಷಣ ಸಂಸ್ಥೆಗಳು ಇವೆ, ಅಲ್ಲಿ ಪ್ರೌಢ ಶಾಲಾ ಶಿಕ್ಷಕರು, ಪದವಿಧರ ಶಿಕ್ಷಕರು ಮಾತ್ರವಲ್ಲದೆ ಅಕ್ರಮವಾಗಿ ಅಟೆಂಡರ್, ಕ್ಲರ್ಕ್ ಗಳಿಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ ಮತದಾರರ ಸಂಖ್ಯೆ ಹೆಚ್ಚು ಮಾಡಿಕೊಂಡಿದ್ದಾರೆ. ಇಡೀ ಕ್ಷೇತ್ರದಲ್ಲಿ 2,500ಕ್ಕೂ ಹೆಚ್ಚು ಮತದಾರರನ್ನು ಸೇರಿಸಿದ್ದಾರೆ. ಇದರ ಬಗ್ಗೆ ದೂರು ನೀಡಿದ್ದೇವೆ ಎಂದು ಹೇಳಿದರು.

ಅಕ್ರಮವಾಗಿ ಸೇರ್ಪಡೆಯಾಗಿರುವ ಮತದಾರರ ಹೆಸರುಗಳನ್ನು ಪರಿಶೀಲಿಸಿ ಪಟ್ಟಿಯಿಂದ ತೆಗೆದುಹಾಕುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಹಾಗೂ ಯುವಜನರು ಹೋರಾಟ ನಡೆಸುತ್ತಿದ್ದಾರೆ. ಇದೀಗ ಶಿಕ್ಷಕರ ಕ್ಷೇತ್ರದಲ್ಲಿಯೂ ನಕಲಿ ಮತದಾರರ ಸೇರ್ಪಡೆ ಮೂಲಕ ಚುನಾವಣೆಯಲ್ಲಿ ಅಕ್ರಮ ನಡೆಸಲು ಪ್ರಯತ್ನಿಸಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಮತದಾರರ ಪಟ್ಟಿಯನ್ನು ಶುದ್ಧೀಕರಿಸಬೇಕು ಎಂದು ಒತ್ತಾಯಿಸಿದರು.

ಆರ್‌ಎಸ್‌ಎಸ್‌ ನಾಯಕರು ಚುನಾವಣಾ ವ್ಯವಸ್ಥೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿದ ಅವರು, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಕಾಪಾಡುವುದು ಅಗತ್ಯವಾಗಿದೆ ಎಂದರು.

ಬಿಜೆಪಿ ಅಭಿವೃದ್ಧಿ ಮತ್ತು ಸಾಧನೆಗಳ ಆಧಾರದ ಮೇಲೆ ಮತ ಕೇಳುವ ಬದಲು ಧರ್ಮ ಹಾಗೂ ಜಾತಿಯ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ. ಶ್ರೀರಾಮ ಮತ್ತು ಧರ್ಮದ ಹೆಸರಿನಲ್ಲಿ ಮತ ಕೇಳುವ ಬಿಜೆಪಿ, ಜನರಿಗೆ ನೀಡಿದ ಕೊಡುಗೆಗಳ ಬಗ್ಗೆ ಮಾತನಾಡುತ್ತಿಲ್ಲ. ಸಮಾಜದಲ್ಲಿ ಜಾತಿ ಮತ್ತು ಧರ್ಮದ ಆಧಾರದಲ್ಲಿ ವಿಭಜನೆ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದೆ ಎಂದು ದೂರಿದರು.

ಕಾಂಗ್ರೆಸ್ ಪಕ್ಷ ಸಮಾನತೆ ಮತ್ತು ಸೌಹಾರ್ದತೆಯ ತತ್ವದಡಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಸಾಗುವುದು ಪಕ್ಷದ ಉದ್ದೇಶವಾಗಿದೆ. ಯುವಕರು ಮತ್ತು ವಿದ್ಯಾರ್ಥಿಗಳು ರಾಜಕೀಯ ಬೆಳವಣಿಗೆಗಳ ಬಗ್ಗೆ ಜಾಗೃತರಾಗಿರಬೇಕು ಎಂದರು.

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಈಗಾಗಲೇ ರಾಯಚೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸ್ಥಳೀಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಕಾಂಗ್ರೆಸ್ ಪರಾಜಿತ ಶಾಸಕರು ಸೇರಿ ಶಾಲಾ ಕಾಲೇಜುಗಳಲ್ಲಿ ಪ್ರಚಾರ ಮಾಡಿದ್ದೇವೆ. ನಮ್ಮ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರು ಸರಳ, ಸಜ್ಜನಿಕೆಯ, ಕ್ರಿಯಾಶೀಲರಾಗಿದ್ದಾರೆ. ಒಂದು ಬಾರಿ ಪಕ್ಷೇತರರಾಗಿ ಹಾಗೂ ಎರೆಡು ಬಾರಿ ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಒಮ್ಮೆ ಗೆಲುವು ಸಾಧಿಸಿದ್ದಾರೆ. ಶಿಕ್ಷಕರ ಅನೇಕ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿರುವ ಅವರು ಬಿಡುವಿನ ಸಮಯದಲ್ಲಿ ಸ್ವಯಂ ಶಿಕ್ಷಕರನ್ನು‌ಭೇಟಿಯಾಗಿ ವೈಯಕ್ತಿಕ ಮಾಹಿತಿ ದಾಖಲಿಸಿ ಮುಂಚೂಣಿಯಲ್ಲಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಪಕ್ಷದಲ್ಲಿನ ಕೆಲ ಗೊಂದಲದಿಂದ ಸ್ವಲ್ಪ ಅಂತರದ ಮತಗಳದ ಸೋತಿದ್ದರು. ಈ ಬಾರಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಯಚೂರು ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮೊಹಮ್ಮದ್ ಶಾಲಂ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಶಾಂತಪ್ಪ, ಮಾಜಿ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ, ಶ್ರೀನಿವಾಸ್ ರೆಡ್ಡಿ, ಅಮರೇಗೌಡ, ಜಯಂತ್ ರಾವ್ ಪತಂಗೆ, ದರೂರು ಬಸವರಾಜ, ಡಾ.ರಜಾಕ್ ಉಸ್ತಾದ್, ಮಂಜುಳಾ ಅಮರೇಶ, ಮರಿಸ್ವಾಮಿ, ಗಿರಿಯಪ್ಪ ನೆಲಹಾಳ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Tags

North-EastTeachersConstituencyelection
share
ವಾರ್ತಾಭಾರತಿ
ವಾರ್ತಾಭಾರತಿ
Next Story
X