Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಿಂಧನೂರು | ತಿಡಿಗೋಳ ಗ್ರಾಮದಲ್ಲಿ...

ಸಿಂಧನೂರು | ತಿಡಿಗೋಳ ಗ್ರಾಮದಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶ: ಸಮಾನತೆ, ಸೌಹಾರ್ದ ಸಂದೇಶ

ಮೂಲಭೂತ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತದಿಂದ ಭರವಸೆ

ವಾರ್ತಾಭಾರತಿವಾರ್ತಾಭಾರತಿ3 Nov 2026 10:14 AM IST
share
ಸಿಂಧನೂರು | ತಿಡಿಗೋಳ ಗ್ರಾಮದಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶ: ಸಮಾನತೆ, ಸೌಹಾರ್ದ ಸಂದೇಶ

ಸಿಂಧನೂರು: ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ಆಂಜನೇಯ ಜಾತ್ರೆಯಲ್ಲಿ ಸವರ್ಣಿಯರ ಹಾಗೂ ದಲಿತ ಸಮುದಾಯದ ಯುವಕರ ನಡುವಿನ ಕಲಹದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜಿಲ್ಲಾಧಿಕಾರಿ, ಜಿಪಂ ಸಿಇಒ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಸಮ್ಮುಖದಲ್ಲಿ ಪರಿಶಿಷ್ಟ ಜಾತಿ ಸನುದಾಯದವರಿಗೆ ದೇವಸ್ಥಾನ ಪ್ರವೇಶ ಕಲ್ಪಿಸಿ ಪೂಜೆ ಮಾಡಿಸಲಾಯಿತು.

ದಲಿತರಿಗೆ ದೇವಸ್ಥಾನ, ಜಾತ್ರೆಗಳಲ್ಲಿ ಪಾಲ್ಗೊಳ್ಳಲು ನಿರ್ಬಂಧಿಸಲಾಗುತ್ತಿದೆ ಎಂದು ಆರೋಪಿಸಿ ದಲಿತರ ಸವರ್ಣಿಯರ ನಡುವೆ ಅನೇಕ ಬಾರಿ ಜಗಳವಾಗಿತ್ತು, ಇತ್ತೀಚೆಗೆ ಆಂಜನೇಯ ದೇವಸ್ಥಾನದ ಜಾತ್ರೆಯ ವೇಳೆಯೂ ಮಾರಾಮಾರಿಯಾಗಿ ದಲಿತ ಸಮುದಾಯದ ಯುವಕರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ ಅಸ್ಪೃಶ್ಯತೆ ನಿವಾರಣೆ, ದಲಿತರಿಗೆ ದೇವಸ್ಥಾನ ಪ್ರವೇಶ ನೀಡಿ ಸಮಾನತೆಯ ಸಂದೇಶ ನೀಡಲಾಯಿತು.

ಭಾರತದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದ ಮೂಲಕ ಪ್ರತಿಪಾದಿಸಿದ ಸಮಾನತೆ, ಸ್ವಾತಂತ್ರ್ಯ, ಸಹೋದರತೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳು ಸಮಾಜದಲ್ಲಿ ಸಾಕಾರಗೊಳ್ಳಬೇಕೆಂಬ ನಿಟ್ಟಿನಲ್ಲಿ ತಿಡಿಗೋಳ ಗ್ರಾಮದಲ್ಲಿ ನಡೆದ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.

ಶಾಂತಿ ಸಭೆ: ತಿಡಿಗೋಳ ಗ್ರಾಮದಲ್ಲಿ ಉಂಟಾಗಿದ್ದ ದೇವಸ್ಥಾನ ಪ್ರವೇಶದ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಪೂವಿತಾ ಎಸ್. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ ಕಾಂದೂ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಶಾವಂತಗೇರಿ ನೇತೃತ್ವದಲ್ಲಿ ಶಾಂತಿಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಗ್ರಾಮದ ಮುಖಂಡರು, ದಲಿತ ಸಮುದಾಯದ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಾಮಾಜಿಕ ಸಾಮರಸ್ಯ ಮತ್ತು ಶಾಂತಿ ಕಾಪಾಡುವ ಕುರಿತು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.

ಈ ಸಭೆಯ ಫಲವಾಗಿ ದಲಿತ ಸಮುದಾಯದವರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಯಿತು. ಹಲವು ವರ್ಷಗಳಿಂದ ಸಾಮಾಜಿಕವಾಗಿ ಎದುರಾಗುತ್ತಿದ್ದ ಅಸಮಾನತೆಯ ಗೋಡೆಯನ್ನು ದಾಟಿ, ಎಲ್ಲರಿಗೂ ಸಮಾನ ಹಕ್ಕು ಮತ್ತು ಗೌರವ ದೊರೆಯಬೇಕೆಂಬ ಸಂವಿಧಾನದ ಆಶಯಕ್ಕೆ ಈ ಘಟನೆ ಸಾಕ್ಷಿಯಾಯಿತು. ದೇವಸ್ಥಾನ ಪ್ರವೇಶಿಸಿದ ದಲಿತ ಸಮುದಾಯದ ಮುಖಗಳಲ್ಲಿ ಕಂಡ ಸಂತೋಷ ಮತ್ತು ಆತ್ಮಗೌರವದ ಭಾವನೆ ಈ ಕ್ಷಣದ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿತು.

ಇದೇ ಸಂದರ್ಭದಲ್ಲಿ ದಲಿತ ಸಮುದಾಯದ ಶೈಕ್ಷಣಿಕ ಪ್ರಗತಿ, ಉದ್ಯೋಗಾವಕಾಶಗಳು ಹಾಗೂ ಗ್ರಾಮದಲ್ಲಿ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆಯೂ ಜಿಲ್ಲಾಧಿಕಾರಿ ಮತ್ತು ಸಿಇಒ ಚರ್ಚಿಸಿ, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ತೀರ್ಮಾನಿಸಿದರು.

ಸಮಾಜದಲ್ಲಿ ಜಾತಿ, ಧರ್ಮ, ವರ್ಗಗಳ ಆಧಾರದ ಮೇಲೆ ಯಾವುದೇ ರೀತಿಯ ತಾರತಮ್ಯವಿಲ್ಲದೆ ಪ್ರತಿಯೊಬ್ಬರಿಗೂ ಸಮಾನ ಹಕ್ಕು, ಗೌರವ ಮತ್ತು ಅವಕಾಶಗಳು ದೊರೆಯಬೇಕು. ಸಂವಿಧಾನ ನೀಡಿರುವ ಹಕ್ಕುಗಳು ಕೇವಲ ಪುಸ್ತಕದ ಪುಟಗಳಿಗೆ ಸೀಮಿತವಾಗದೆ, ಪ್ರತಿಯೊಬ್ಬರ ಬದುಕಿನಲ್ಲಿಯೂ ಅನುಷ್ಠಾನಗೊಳ್ಳಬೇಕು ಎಂಬುದನ್ನು ತಿಡಿಗೋಳ ಗ್ರಾಮದ ಈ ಬೆಳವಣಿಗೆ ನೆನಪಿಸುತ್ತದೆ.

ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ದಿಕ್ಕಿನಲ್ಲಿ ಜಿಲ್ಲಾಡಳಿತ ಕೈಗೊಂಡ ಈ ಪ್ರಯತ್ನ ಶ್ಲಾಘನೀಯವಾಗಿದೆ. ಶಾಂತಿ, ಸೌಹಾರ್ದ ಹಾಗೂ ಮಾನವೀಯ ಮೌಲ್ಯಗಳಿಗೆ ಆದ್ಯತೆ ನೀಡಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಲು ಮುತುವರ್ಜಿ ವಹಿಸಿದ ಅಧಿಕಾರಿಗಳಿಗೆ ಸ್ಥಳೀಯರು ಧನ್ಯವಾದಗಳು ತಿಳಿಸಿದರು.

Tags

Dalit Temple EntryTidigola VillageSindhanoor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X