Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು: ಜಿಲ್ಲಾಮಟ್ಟದ ದಸರಾ...

ರಾಯಚೂರು: ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ31 Aug 2025 8:11 PM IST
share
  • ರಾಯಚೂರು: ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
  • ರಾಯಚೂರು: ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

ರಾಯಚೂರು: ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಯಚೂರು ಇವರ ಸಹಯೋಗದಲ್ಲಿ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ರಾಯಚೂರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಗಸ್ಟ್ 31ರಂದು ಚಾಲನೆ ನೀಡಲಾಯಿತು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ ಅವರು ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲಿ ಕ್ರೀಡೆಗಳು ಮಹತ್ವ ಪಡೆದುಕೊಳ್ಳುತ್ತವೆ. ಓದು-ಬರಹದ ಜತೆ ಕ್ರೀಡೆಗಳಲ್ಲಿ ಭಾಗವಹಿಸುವವರ ಜೀವನ ಪರಿಪೂರ್ಣವಾಗಿರುತ್ತದೆ. ಕ್ರೀಡಾಪಟುಗಳು ಶಿಸ್ತನ್ನು ಸಹ ಮೈಗೂಡಿಸಿಕೊಳ್ಳುವುದು ಮುಖ್ಯ. ಹಾಗೆ ಮಾಡುವುದರಿಂದ ಕ್ರೀಡೆಯಲ್ಲಿ ಯಶಸ್ಸಿನ ಜತೆ ಜೀವನದಲ್ಲಿ ಸಾಧನೆ ಮಾಡಿದಂತಾಗುತ್ತದೆ ಎಂದರು.

ಈ ವೇಳೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣ ಶಾವಂತಗೇರಿ ಅವರು ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಅವುಗಳಿಗೆ ಅಂಜದೇ ಪ್ರತಿಯೊಬ್ಬರು ಕ್ರೀಡಾ ಸ್ಪೂರ್ತಿ ಬೆಳೆಸಿಕೊಂಡು ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೀರೇಶ ನಾಯಕ ಅವರು ಮಾತನಾಡಿ, ಈಗಾಗಲೇ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ತಾಲ್ಲೂಕು ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾದವರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ, ನಂತರ ವಿಭಾಗದ ಮಟ್ಟದ ವಿಜೇತ ಕ್ರೀಡಾಪಟುಗಳು ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗುವರು. ರಾಜ್ಯಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್ 22 ರಿಂದ 25 ರವರೆಗೆ ಮೈಸೂರಿನ ಚಾಮುಂಡಿ ವಿಹಾರದ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪುರುಷರು ಹಾಗೂ ಮಹಿಳಾ ಕ್ರೀಡಾಪಟುಗಳು ಆನ್‌ಲೈನ್ ನೋಂದಣಿ ಮಾಡಿಕೊಂಡಿದ್ದಾರೆ. ಹೆಚ್ಚು ಕ್ರೀಡಾಪುಟಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ ಬಾಸ್ಕೆಟ್ ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್ ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ವಿಭಾಗಗಳ ಸ್ಪರ್ಧೆಗಳಲ್ಲಿ ಪುರುಷ ಮತ್ತು ಮಹಿಳಾ ಸ್ಪರ್ಧಿಗಳು ಹುಮ್ಮಸ್ಸಿನಿಂದ ಭಾಗವಹಿಸಿ ಗೆಲುವಿಗಾಗಿ ಸೆಣಸಾಡಿದರು. ಇದೇ ಸಂದರ್ಭದಲ್ಲಿ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಪರಶುರಾಮ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X