ಅ.8ರಂದು ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಡಿಸಿಎಂ ಪರಮೇಶ್ವರ್ ಬರ ಪರಿಶೀಲನೆ

ರಾಯಚೂರು : ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಅ.8ರಂದು ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅ.8ರಂದು ಬೆಳಿಗ್ಗೆ 8.30ಕ್ಕೆ ಹೊಸಪೇಟೆಯಿಂದ ರಸ್ತೆ ಮಾರ್ಗವಾಗಿ ಪ್ರಯಾಣ ಆರಂಭಿಸಲಿರುವ ಅವರು, ಬೆಳಿಗ್ಗೆ 9ಕ್ಕೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಬರಪೀಡಿತ ತಾಲ್ಲೂಕುಗಳ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.
ನಂತರ ಸಂಜೆ 4ಕ್ಕೆ ಕೊಪ್ಪಳ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಬಳಿಕ ಸಂಜೆ 6ಕ್ಕೆ ಕೊಪ್ಪಳದಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದು, ರಾತ್ರಿ 8.25ರ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಡಾ. ಚನ್ನಬಸಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




