ಕರ್ನಲ್ ಸೋಫಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆನೀಡಿದ ವಿಜಯ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ರಾಯಚೂರು: ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮಧ್ಯಪ್ರದೇಶದ ಸಚಿವ ಕುನ್ವರ್ ವಿಜಯ್ ಶಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಅವರಿಗೆ ದೂರು ಸಲ್ಲಿಸಲಾಯಿತು.
ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೈಯದ್ ಫಯಾಝುದ್ದೀನ್ ನೇತೃತ್ವದಲ್ಲಿ ಸಮಾಜದ ಮುಖಂಡರು, ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು ಎಸ್ಪಿ ಮೂಲಕ ರಾಷ್ಟ್ರಪತಿಗೆ, ಪ್ರಧಾನಿಗೆ ದೂರು ಸಲ್ಲಿಸಿದರು.
ವಿಜಯ್ ಶಾ ಅವರು ಕರ್ನಲ್ ಸೋಫಿಯಾ ಅವರನ್ನು ಉಗ್ರರ ಸಹೋದರಿ ಎಂದು ಸಾರ್ವಜನಿಕ ವೇದಿಕೆಯಲ್ಲಿ ಭಾಷಣ ಮಾಡಿದ್ದು ಖಂಡನೀಯ. ಆ ಮೂಲಕ ದೇಶದ ಸೈನಿಕರಿಗೆ ಹಾಗೂ ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಕೂಡಲೇ ಅವರನ್ನು ಸ್ಥಾನದಿಂದ ವಜಾಗೊಳಿಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
Next Story





