Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ದೇವದುರ್ಗ | ಹುತ್ತಕ್ಕೆ ಹಾಲು ಎರೆಯುವ...

ದೇವದುರ್ಗ | ಹುತ್ತಕ್ಕೆ ಹಾಲು ಎರೆಯುವ ಬದಲು ಬಡ ಮಕ್ಕಳಿಗೆ ವಿತರಿಸಿ ಬಸವ ಪಂಚಮಿ ಆಚರಿಸಲು ಕರೆ

ವಾರ್ತಾಭಾರತಿವಾರ್ತಾಭಾರತಿ17 Aug 2026 8:36 PM IST
share
ದೇವದುರ್ಗ | ಹುತ್ತಕ್ಕೆ ಹಾಲು ಎರೆಯುವ ಬದಲು ಬಡ ಮಕ್ಕಳಿಗೆ ವಿತರಿಸಿ ಬಸವ ಪಂಚಮಿ ಆಚರಿಸಲು ಕರೆ

ದೇವದುರ್ಗ: ನಾಗರ ಪಂಚಮಿ ಸಂದರ್ಭದಲ್ಲಿ ಹುತ್ತ ಅಥವಾ ಕಲ್ಲು ನಾಗರಕ್ಕೆ ಹಾಲು ಎರೆಯುವ ಬದಲು, ಪೌಷ್ಟಿಕಾಂಶಯುಕ್ತ ಹಾಲನ್ನು ಬಡ ಹಾಗೂ ಅಗತ್ಯವಿರುವ ಮಕ್ಕಳಿಗೆ ವಿತರಿಸುವ ಮೂಲಕ ಬಸವ ಪಂಚಮಿ ಆಚರಿಸಬೇಕು ಎಂದು ಕರ್ನಾಟಕ ಮಾನವ ಬಂಧುತ್ವ ವೇದಿಕೆಯ ತಾಲೂಕು ಸಂಚಾಲಕ ರಂಗಪ್ಪನಾಯಕ ಬುಂಕಲದೊಡ್ಡಿ ಹೇಳಿದರು.

ಜಾಲಹಳ್ಳಿ ಸಮೀಪದ ಚಿಂಚೋಡಿ ಗ್ರಾಮದಲ್ಲಿ ಸೋಮವಾರ ಕರ್ನಾಟಕ ಮಾನವ ಬಂಧುತ್ವ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲು ಮಕ್ಕಳ ಆರೋಗ್ಯ ಮತ್ತು ಬೆಳವಣಿಗೆಗೆ ಅಗತ್ಯವಾದ ಪೌಷ್ಟಿಕ ಆಹಾರವಾಗಿದೆ. ಅದನ್ನು ಹುತ್ತ ಅಥವಾ ಕಲ್ಲಿನ ನಾಗರ ಮೂರ್ತಿಗೆ ಎರೆಯುವ ಮೂಲಕ ವ್ಯರ್ಥ ಮಾಡುವ ಬದಲು ಹಸಿದ ಮಕ್ಕಳಿಗೆ ನೀಡುವುದು ಹೆಚ್ಚು ಮಾನವೀಯ ಕಾರ್ಯ ಎಂದರು.

ಬಸವಣ್ಣನವರ “ಕಲ್ಲ ನಾಗರ ಕಂಡರೆ ಹಾಲನೆರೆಯೆಂಬರು, ದಿಟದ ನಾಗರ ಕಂಡರೆ ಕೊಲ್ಲೆಂಬರು” ಎಂಬ ವಚನದ ಆಶಯವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ವಿವಿಧೆಡೆ ಬಸವ ಪಂಚಮಿ ಆಚರಿಸಲಾಗುತ್ತಿದೆ. ಮಕ್ಕಳಿಗೆ ಹಾಲು ವಿತರಿಸುವ ಮೂಲಕ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂದೇಶವನ್ನು ಅಭಿಯಾನ ಸಾರುತ್ತಿದೆ ಎಂದು ತಿಳಿಸಿದರು.

“ಹಾಲನ್ನು ವ್ಯರ್ಥ ಮಾಡುವ ಬದಲು ಬಡ ಮಕ್ಕಳಿಗೆ ಕುಡಿಯಲು ನೀಡಿ. ಹಬ್ಬದ ಆಚರಣೆಯೊಂದಿಗೆ ಮಾನವೀಯತೆ ಹಾಗೂ ವೈಚಾರಿಕತೆಯನ್ನು ಬೆಳೆಸೋಣ” ಎಂಬ ಸಂದೇಶದೊಂದಿಗೆ ಬಸವ ಪಂಚಮಿ ಆಚರಿಸಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಶಿವಗುಂಡಪ್ಪ ಕೊಂಡಿ ಮಾಜಿ ಸದಸ್ಯರು, ಭೀಮಣ್ಣ ಹಾವಿನಳ, ಚಂದ್ರು ನಾಯಕ, ಹೋಬಳಿ ಸಂಚಾಲಕ ಶಿವಪ್ಪ ಕಂಪುರು, ಶ್ರೀಮೌನ ಸಾಗರ, ಚಲುವಾದಿ ಮಹಾಸಭಾ ಹೋಬಳಿ ಅಧ್ಯಕ್ಷರು ಡಿ ಎಮ್ ಜ್ಯೋತಿ, ಮಹಿಳಾ ಸಂಚಾಲಕಿ ಶಾಂಭವಿ ಹಿರೇಮಠ್, ಉಮಾದೇವಿ ದೊಡ್ಡಮನಿ , ಮರೆಮ್ಮ ಮುಂಡರಗಿ, ಮಹಾದೇವಮ್ಮ ಮುಂದಿನಮನಿ, ಯಮುನಮ್ಮ ಮಂಗಿಹಾಳ, ರೇಣುಕಮ್ಮ, ದುರುಗಮ್ಮ, ಭಾರತಿ, ರಮೇಶ್ ಕಳ್ದೆವನಹಳ್ಳಿ ಶಿವರಾಜ ಮುಂಡರಗಿ, ಲಕ್ಷ್ಮಿ ಸೇರಿದಂತೆ ಇತರರು ಇದ್ದರು.

Tags

Devadurga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X