ದೇವದುರ್ಗ | ಎಪಿಎಂಸಿ ಗೋದಾಮಿಗೆ ಆಕಸ್ಮಿಕ ಬೆಂಕಿ: ಅಪಾರ ಪ್ರಮಾಣದ ದವಸ-ಧಾನ್ಯ ಭಸ್ಮ

ದೇವದುರ್ಗ: ಪಟ್ಟಣದ ರಸ್ತೆಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಗೋದಾಮಿಗೆ ಮಂಗಳವಾರ ರಾತ್ರಿ ಬೆಂಕಿ ತಗುಲಿ ಅಪಾರ ಪ್ರಮಾಣದ ದವಸ-ಧಾನ್ಯ ಸುಟ್ಟು ಭಸ್ಮಗೊಂಡ ಘಟನೆ ನಡೆದಿದೆ.
ರಾತ್ರಿ ಸುಮಾರು 10.30 ಗಂಟೆಗೆ ಗೋದಾಮಿನ ಮೇಲ್ಭಾಗದಲ್ಲಿರುವ ಮನೆಯ ಮಾಲೀಕರಾದ ಬಸವರಾಜ ಅವರು ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿ ತಕ್ಷಣ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿದ್ದರಿಂದ ಬೆಂಕಿ ನಿಯಂತ್ರಣಕ್ಕೆ ತರಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
Next Story




