Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Devadurga | ಎಸ್‌ಐಆರ್ ಮೂಲಕ ಮತದಾನದ...

Devadurga | ಎಸ್‌ಐಆರ್ ಮೂಲಕ ಮತದಾನದ ಹಕ್ಕು ಕಸಿಯುವ ಯತ್ನ: ಎಂ.ಆರ್.ಭೇರಿ ಆರೋಪ

ವಾರ್ತಾಭಾರತಿವಾರ್ತಾಭಾರತಿ25 May 2026 9:43 PM IST
share
Devadurga | ಎಸ್‌ಐಆರ್ ಮೂಲಕ ಮತದಾನದ ಹಕ್ಕು ಕಸಿಯುವ ಯತ್ನ: ಎಂ.ಆರ್.ಭೇರಿ ಆರೋಪ

ದೇವದುರ್ಗ: ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಮಹಿಳೆಯರು, ಅಲ್ಪಸಂಖ್ಯಾತರು, ದಲಿತರು ಹಾಗೂ ಬಡಜನರ ಮತದಾನದ ಹಕ್ಕು ಕಸಿಯುವ ಪ್ರಯತ್ನ ನಡೆಯುತ್ತಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ರಂಗಪ್ಪ ಗೋಸಲ್ ಹಾಗೂ ದಲಿತ ಮುಖಂಡ ಎಂ.ಆರ್.ಭೇರಿ ಆರೋಪಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಓದಿಲ್ಲದವರಾಗಿರಲಿ, ಆಸ್ತಿ ಇಲ್ಲದವರಾಗಿರಲಿ, ಯಾವುದೇ ಧರ್ಮ ಅಥವಾ ಜಾತಿಗೆ ಸೇರಿದವರಾಗಿರಲಿ, ಈ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕು ಇದೆ ಎಂಬುದು ಭಾರತೀಯ ಸಂವಿಧಾನದ ಸಮಾನತೆಯ ಘೋಷಣೆ. ಆದರೆ ಸಂಘ ಪರಿವಾರದ ಶಕ್ತಿಗಳು ಮಹಿಳೆಯರು, ಅನಕ್ಷರಸ್ಥರು, ನಿರ್ಗತಿಕರು ಹಾಗೂ ದಮನಿತ ವರ್ಗಗಳಿಗೆ ಮತದಾನದ ಹಕ್ಕು ನೀಡಬಾರದು ಎಂಬ ಮನೋಭಾವ ಹೊಂದಿದ್ದವು,” ಎಂದು ಆರೋಪಿಸಿದರು.

ಮೇ 30ರಂದು ವಿವಿಧ ಪ್ರಗತಿಪರ ಸಂಘಟನೆಗಳು, ಚಿಂತಕರು ಹಾಗೂ ಸಾಹಿತಿಗಳ ನೇತೃತ್ವದಲ್ಲಿ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

“ರಾಜಕೀಯ ದುರುದ್ದೇಶದಿಂದ ಎಸ್‌ಐಆರ್ ಪ್ರಕ್ರಿಯೆ ಬಳಸಲಾಗುತ್ತಿದೆ. ಜನಪ್ರಿಯತೆ ಕಳೆದುಕೊಳ್ಳುತ್ತಿರುವ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲು ಹಾಗೂ ವಿರೋಧ ಪಕ್ಷಗಳ ಮತಗಳನ್ನು ಅಳಿಸಲು ಕುಟಿಲ ತಂತ್ರ ರೂಪಿಸಿದೆ,” ಎಂದು ಆರೋಪಿಸಿದರು.

ಪಶ್ಚಿಮ ಬಂಗಾಳದಲ್ಲಿ ಮತದಾರರ ಹೆಸರು ಅಳಿಸುವಿಕೆ ನಡೆದ ಕ್ಷೇತ್ರಗಳಲ್ಲಿ ಬಿಜೆಪಿ ಹೆಚ್ಚಿನ ಗೆಲುವು ಸಾಧಿಸಿರುವುದನ್ನು ಉದಾಹರಿಸಿದ ಅವರು, ಕರ್ನಾಟಕದಲ್ಲಿಯೂ ಇದೇ ಮಾದರಿಯ ಪರಿಸ್ಥಿತಿ ಮರುಕಳಿಸದಂತೆ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಕರೆ ನೀಡಿದರು.

“ಹೊಸ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು 11 ದಾಖಲೆಗಳನ್ನು ಕಡ್ಡಾಯಗೊಳಿಸುವ ಮೂಲಕ ಸಾಮಾನ್ಯ ಜನರಿಗೆ ಸಂಕೀರ್ಣ ಪರಿಸ್ಥಿತಿ ನಿರ್ಮಿಸಲಾಗಿದೆ. ಈ ಪ್ರಕ್ರಿಯೆಯಿಂದ ವಿವಾಹಿತ ಮಹಿಳೆಯರು, ವಲಸೆ ಕಾರ್ಮಿಕರು, ಅಲೆಮಾರಿಗಳು, ಆದಿವಾಸಿಗಳು, ದಲಿತರು ಹಾಗೂ ಅಲ್ಪಸಂಖ್ಯಾತರು ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ,” ಎಂದು ಹೇಳಿದರು.

ಮೇ 30ರಂದು ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಶ್ವನಾಥ್‌ ಬಿಲ್ಲಿದವ್‌, ಮೋಹನ್‌ ಬಲ್ಲಿದವ್‌, ಫೇರೋಜ್‌ ಖಾನ್‌, ಇಮಾಮ್‌ ಗೌರಂಪೇಟೆ, ಶಿವರಾಜ ರುದ್ರಾಕ್ಷಿ, ಹನುಮಂತ್ರಾಯ ದೊರೆ ಸೇರಿದಂತೆ ಇತರರು ಇದ್ದರು.

Tags

Devadurga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X