ದೇವದುರ್ಗ | ಸಿಡಿಲು ಬಡಿದು ಆಕಳು ಸಾವು

ದೇವದುರ್ಗ : ತಾಲೂಕಿನ ಕ್ಯಾದಿಗೇರಾ ಸಮೀಪದ ಉಳಕಬಂಡಿ ತಾಂಡಾದಲ್ಲಿ ಸಿಡಿಲು ಬಡಿದು ಆಕಳು ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಗ್ರಾಮದ ರೈತ ಲಚಮಪ್ಪ ಅವರ ಆಕಳು ಜಮೀನಿನಲ್ಲಿ ಮೇಯುತ್ತಿದ್ದ ವೇಳೆ ಸಿಡಿಲು ಬಡಿದಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಕಂದಾಯ ಹಾಗೂ ಗ್ರಾಪಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆಕಳು ಸಾವಿಗೀಡಾದ ಹಿನ್ನೆಲೆಯಲ್ಲಿ ಮಾಲಕನಿಗೆ ಪರಿಹಾರ ನೀಡಲು ಕಂದಾಯ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
Next Story