Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Devadurga | ಜನಸ್ಪಂದನೆಯಲ್ಲಿ ಗದ್ದಲ :...

Devadurga | ಜನಸ್ಪಂದನೆಯಲ್ಲಿ ಗದ್ದಲ : ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಶಾಸಕಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 April 2026 9:10 PM IST
share
Devadurga | ಜನಸ್ಪಂದನೆಯಲ್ಲಿ ಗದ್ದಲ : ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಶಾಸಕಿ ಸೂಚನೆ

ದೇವದುರ್ಗ : ಪಟ್ಟಣದ ಎಲ್ಲಾ ವಾರ್ಡಗಳ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಸೋಮವಾರ ಪುರಸಭೆ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಜನಸ್ಪಂದನೆ ಕಾರ್ಯಕ್ರಮ ಸಾರ್ವಜನಿಕರಿಗೆ ಅನುಕೂಲಕರವಾಗಬೇಕು ಎಂದು ಶಾಸಕಿ ಕರೆಮ್ಮ.ಜಿ. ನಾಯಕ್ ಹೇಳಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕರು ರಸ್ತೆ, ಕುಡಿಯುವ ನೀರು, ವಿದ್ಯುತ್ ಕಂಬಗಳು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಅಳಲು ತೋಡಿಕೊಂಡರು. ಈ ವೇಳೆ ಪುರಸಭೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ಸಾರ್ವಜನಿಕರು ಶಾಸಕಿ ಎದುರು ಆಕ್ರೋಶ ವ್ಯಕ್ತಪಡಿಸಿದ್ದು, ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಪಟ್ಟಣದಲ್ಲಿ ಮಟ್ಕಾ, ಬೆಟ್ಟಿಂಗ್ ಹಾಗೂ ಅಕ್ರಮ ಮದ್ಯದ ಚಟುವಟಿಕೆಗಳು ಹೆಚ್ಚಾಗಿದ್ದು, ಯುವಕರು ದುಷ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಶಾಸಕಿ ತಿಳಿಸಿ, ಇಂತಹ ಅಕ್ರಮ ಚಟುವಟಿಕೆಗಳಿಗೆ ತಕ್ಷಣ ಕಡಿವಾಣ ಹಾಕುವಂತೆ ಪೊಲೀಸ್ ಹಾಗೂ ಅಬಕಾರಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜನಸ್ಪಂದನೆ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸಬೇಕು. ಇಲ್ಲವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಪ್ರತಿ ವಾರ್ಡದಲ್ಲೂ ಕುಡಿಯುವ ನೀರು, ರಸ್ತೆ, ವಿದ್ಯುತ್ ದೀಪ, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ಕೊರತೆ ಕುರಿತು ಹಲವಾರು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸದಿರುವುದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ, ಅಲಮುದ್ದೀನ್, ಶಿವರಾಜ್ ಪೂಜಾರಿ, ಡಾ. ಬನೇಶ್, ದೇವೇಂದ್ರ ಕಡೇಕರ್, ಪುರಸಭೆ ಮುಖ್ಯಾಧಿಕಾರಿ ಹಂಪಯ್ಯ, ಪಿ.ಐ ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪಟ್ಟಣದಲ್ಲಿ ಬಿಡಾಡಿ ದನಗಳಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಖಾತಾ, ಮುಟೇಷನ್ ಹಾಗೂ ಕಟ್ಟಡ ಅನುಮತಿಗೆ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ವಿವಿಧ ಸೇವೆಗಳ ದರಪಟ್ಟಿಯನ್ನು ಸಾರ್ವಜನಿಕರಿಗೆ ಗೋಚರವಾಗುವಂತೆ ಪ್ರದರ್ಶಿಸಬೇಕು ಎಂದು ಗಂಗನಗೌಡ ಗೌರಂಪೇಟ ಒತ್ತಾಯಿಸಿದರು.


ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿ ಚರಂಡಿ ಹಾಗೂ ರಸ್ತೆ ಸಮಸ್ಯೆಗಳು ಗಂಭೀರವಾಗಿವೆ. ಪುರಸಭೆ ಮುಖ್ಯಾಧಿಕಾರಿ ಸಮಸ್ಯೆಗಳನ್ನು ಆಲಿಸದೇ ನಿರ್ಲಕ್ಷ್ಯ ತೋರಿದ್ದಾರೆ. ಹೈಟೆಕ್ ಶೌಚಾಲಯ ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟದ ಆರೋಪಗಳಿದ್ದರೂ ಸ್ಪಷ್ಟನೆ ನೀಡಲಾಗಿಲ್ಲ ಎಂದು ರೈತ ಸಂಘದ ಮುಖಂಡ ತಿಮ್ಮನಗೌಡ ಆರೋಪಿಸಿದರು.




Tags

Devadurga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X