ದೇವದುರ್ಗ | ಯುಗಾದಿ ಹಬ್ಬದ ನೆಪದಲ್ಲಿ ಪ್ರಾಣಿಗಳ ಭೇಟೆಯಾಡಿದರೆ ಸೂಕ್ತ ಕ್ರಮ : ಅಲಿಉದ್ದೀನ್

ದೇವದುರ್ಗ: ತಾಲೂಕಿನ ಅರಕೇರಾ, ಗಬ್ಬೂರು ಹಾಗೂ ಜಾಲಹಳ್ಳಿ ಪ್ರದೇಶಗಳಲ್ಲಿ ಯುಗಾದಿ ಹಬ್ಬದ ನೆಪದಲ್ಲಿ ಕಾಡು ಪ್ರಾಣಿಗಳ ಬೇಟೆ ಹಾಗೂ ಹಿಂಸೆ ನಡೆಸಿದಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಅರಣ್ಯ ವಲಯಾಧಿಕಾರಿ ಮುಹಮ್ಮದ್ ಅಲಿ ಉದ್ದೀನ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ವನ್ಯಪ್ರಾಣಿಗಳನ್ನು ಅಕ್ರಮವಾಗಿ ಬೇಟೆಯಾಡುವುದು ಕಂಡುಬಂದರೆ ಪ್ರಕರಣ ದಾಖಲಿಸಿ ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಬೇಟೆಗೆ ಸಂಬಂಧಿಸಿದ ದೃಶ್ಯಗಳು ಅಥವಾ ಮಾಹಿತಿಗಳು ಪತ್ತೆಯಾದರೂ ಕೂಡ ಸಂಬಂಧಪಟ್ಟವರ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1976ರಡಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ವನ್ಯಜೀವಿಗಳ ಸಂರಕ್ಷಣೆಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
Next Story




