Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ದೇವದುರ್ಗ | ಸಾಮೂಹಿಕ ವಿವಾಹಗಳು ದುಂದು...

ದೇವದುರ್ಗ | ಸಾಮೂಹಿಕ ವಿವಾಹಗಳು ದುಂದು ವೆಚ್ಚಕ್ಕೆ ಕಡಿವಾಣ : ನಾಗಲಕ್ಷ್ಮೀ ಚೌಧರಿ

ವಾರ್ತಾಭಾರತಿವಾರ್ತಾಭಾರತಿ28 Jan 2026 12:18 AM IST
share
ದೇವದುರ್ಗ | ಸಾಮೂಹಿಕ ವಿವಾಹಗಳು ದುಂದು ವೆಚ್ಚಕ್ಕೆ ಕಡಿವಾಣ : ನಾಗಲಕ್ಷ್ಮೀ ಚೌಧರಿ
ಗಬ್ಬೂರಿನ ಬೂದಿ ಬಸವೇಶ್ವರ ಜಾತ್ರೆಯಲ್ಲಿ 152ಜೋಡಿಗಳ ಸಾಮೂಹಿಕ ವಿವಾಹ

ದೇವದುರ್ಗ: ಸಾಮೂಹಿಕ ವಿವಾಹ ಪದ್ಧತಿ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ಜೊತೆಗೆ ಬಡವರಿಗೆ ಆರ್ಥಿಕ ಬಲ ನೀಡುತ್ತದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು.

ಅವರು ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ಬೂದಿ ಬಸವೇಶ್ವರ ಸಂಸ್ಥಾನ ಮಠದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು.

ಸಾಮೂಹಿಕ ವಿವಾಹಗಳು ಸಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿವೆ. ಜಾತಿ ವ್ಯವಸ್ಥೆಯನ್ನು ದೇವರು ಸೃಷ್ಟಿಸಿಲ್ಲ, ಮನುಷ್ಯನೇ ನಿರ್ಮಿಸಿದ್ದಾನೆ. ಇದರ ಪರಿಣಾಮವಾಗಿ ಅಸಮಾನತೆ ಹೆಚ್ಚಿದ್ದು, ಬಡವರು ಬಡವರಾಗಿಯೇ ಉಳಿದರೆ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕಿ ಕರೆಮ್ಮ ಜಿ. ನಾಯಕ್‌ ಅವರು, ನೂತನ ದಂಪತಿಗಳು ಪರಸ್ಪರ ಅರ್ಥಮಾಡಿಕೊಂಡು, ಸುಖ–ದುಃಖಗಳನ್ನು ಸಮನ್ವಯದಿಂದ ಎದುರಿಸಿಕೊಂಡು ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ಶಾಸಕ ಶರಣಗೌಡ ಕಂದಕೂರ ಮಾತನಾಡಿ, ಇಂದಿನ ಕಾಲದಲ್ಲಿ ಮದುವೆ ಸುಲಭವಲ್ಲ. ಬಡವರು ಶ್ರೀಮಂತರನ್ನು ಅನುಸರಿಸಿ ದುಂದು ವೆಚ್ಚದ ಮದುವೆ ಮಾಡಬಾರದು. ದುಬಾರಿ ಮದುವೆಗಳು ಬಡವರನ್ನು ಸಾಲಗಾರರನ್ನಾಗಿಸುತ್ತವೆ ಎಂದು ಎಚ್ಚರಿಸಿದರು.

ಈ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 152 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌, ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ವೆಂಕಟಸಿಂಗ್, ಬೂದಿ ಬಸವೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಬೂದಿಬಸವೇಶ್ವರ ಶಿವಾಚಾರ್ಯರರು, ಕಿಲ್ಲೇ ಬೃಹನ್ಮಠದ ಶಿವಾಚಾರ್ಯರು, ಶಾಂತಮಲ್ಲ ಶಿವಾಚಾರ್ಯರು, ನವಲಕಲ್ ಮಠದ ಸೋಮನಾಥ ಗುರುವಿನ ಸಿದ್ದಯ್ಯಸ್ವಾಮಿ, ವಿನಯ ಗುರೂಜಿ, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಶಾಸಕರಾದ ಬಸನಗೌಡ ದದ್ದಲ್, ಡಾ.ಶಿವರಾಜ ಪಾಟೀಲ, ರಾಜಾ ವೇಣುಗೋಪಾಲ ನಾಯಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ, ಮಾಜಿ ಸಂಸದ ಬಿ.ವಿ. ನಾಯಕ, ಮಾಜಿ ಸಚಿವ ಕೆ.ಶಿವನಗೌಡ ನಾಯಕ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ, ಕಾಂಗ್ರೆಸ್ ಮುಖಂಡ ರವಿ ಬೋಸರಾಜ, ಕೆ.ಶಾಂತಪ್ಪ, ರುದ್ರಪ್ಪ ಅಂಗಡಿ ಹಾಗೂ ಶ್ರೀದೇವಿ ನಾಯಕ ಸೇರಿ ಹಲವರು ಹಾಜರಿದರು.

Tags

Devdurga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X