Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ದೇವದುರ್ಗ | ಕನಕದಾಸರ ಕುರಿತ ಮುಕ್ಕಣ್ಣ...

ದೇವದುರ್ಗ | ಕನಕದಾಸರ ಕುರಿತ ಮುಕ್ಕಣ್ಣ ಕರಿಗಾರರ ಮೂರು ಕೃತಿಗಳ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ22 March 2026 9:43 PM IST
share
ದೇವದುರ್ಗ | ಕನಕದಾಸರ ಕುರಿತ ಮುಕ್ಕಣ್ಣ ಕರಿಗಾರರ ಮೂರು ಕೃತಿಗಳ ಲೋಕಾರ್ಪಣೆ

ದೇವದುರ್ಗ: ಭಾರತೀಯರ ಹೊಸ ವರ್ಷವಾದ ಪರಾಭವ ಸಂವತ್ಸರದ ಯುಗಾದಿ ಪಾಡ್ಯದಂದು ಗಬ್ಬೂರಿನ ಮಹಾಶೈವ ಧರ್ಮಪೀಠದಲ್ಲಿ ಕ್ಷೇತ್ರನಾಥ ವಿಶ್ವೇಶ್ವರ ಶಿವನ ಸನ್ನಿಧಿಯಲ್ಲಿ ಮುಕ್ಕಣ್ಣ ಕರಿಗಾರರ ರಚನೆಯ ಕನಕದಾಸರ ಕುರಿತ ಮೂರು ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಲಾಯಿತು.

ಮಾರ್ಚ್ 19ರಂದು ಶ್ರೀಕ್ಷೇತ್ರ ಕೈಲಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಿರವಾರ ತಾಲೂಕಿನ ಬಾಗಲವಾಡ ಗ್ರಾಮದ ಗಾಯತ್ರಿ ಶಕ್ತಿ ಪೀಠದ ಪೀಠಾಧ್ಯಕ್ಷರಾದ, ಬಳ್ಳಾರಿ ಮುತ್ತ್ಯಾ ಎಂದು ಪ್ರಸಿದ್ಧರಾಗಿರುವ ಶಿವಯ್ಯ ಸ್ವಾಮಿಗಳು ಈ ಕೃತಿಗಳನ್ನು ಬಿಡುಗಡೆಗೊಳಿಸಿದರು.

ಲೋಕಾರ್ಪಣೆಯಾದ ಕೃತಿಗಳಲ್ಲಿ ‘ಕನಕ ದರ್ಶನ’ ಕವನ ಸಂಕಲನ, ‘ಲೋಕಬಂಧು ಕನಕದಾಸರು’ ಹಾಗೂ ‘ಪುರಂದರದಾಸರ ಹೆಸರಿನಲ್ಲಿರುವ ಕನಕದಾಸರ ಕೀರ್ತನೆಗಳು’ ಎಂಬ ಮೂರು ಪ್ರಮುಖ ಪುಸ್ತಕಗಳು ಸೇರಿವೆ.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ಕರ್ನಾಟಕ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಹುದ್ದೆಗೆ ಆಯ್ಕೆಯಾದ ಮುಕ್ಕಣ್ಣ ಕರಿಗಾರ ಅವರ ಶಿಷ್ಯ ಷಣ್ಮುಖ ಹೂಗಾರ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಹಾಶೈವ‌ಧರ್ಮಪೀಠದ ಆಡಳಿತಾಧಿಕಾರಿ ತ್ರಯಂಬಕೇಶ, ಹಿರಿಯ ಪತ್ರಕರ್ತರಾದ ಮಲ್ಲಿಕಾರ್ಜುನ ದೇಸಾಯಿ, ಬಸವರಾಜ ಭೋಗಾವತಿ,ಶಹಾಪುರದ ಕಲಾನಿಕೇತನ ಟ್ರಸ್ಟಿನ ಅಧ್ಯಕ್ಷರಾದ ಕವಿ ಸಾಹಿತಿ ಬಸವರಾಜ ಸಿನ್ನೂರ, ಪ್ರಗತಿಪರ ಚಿಂತಕ ಶಿಕ್ಷಕ ಮಲ್ಲಿಕಾರ್ಜುನ ಬಾಗಲವಾಡ, ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅಮರೇಶ ದೇಸಾಯಿ, ಪತ್ರಕರ್ತ ಏಳುಬಾವೆಪ್ಪಗೌಡ,ಗೋಪಾಲ ಮಸೀದಪುರ, ಬಾಬುಗೌಡ ಯಾದವ್ ಸುಲ್ತಾನಪುರ, ಮೃತ್ಯುಂಜಯ ಯಾದವ್,ಸಿದ್ರಾಮಯ್ಯಸ್ವಾಮಿ ರಘುನಾಥನಹಳ್ಳಿ, ವಿರುಪಾಕ್ಷಿ ಗೌಡ ಹೊನ್ನಟಗಿ, ಷಣ್ಮುಖ ಹೂಗಾರ,ಬಸವಲಿಂಗ ಕರಿಗಾರ,ದೇವರಾಜ ಕರಿಗಾರ,ರಂಗನಾಥ ಮಸೀದಪುರ, ವೆಂಕಟೇಶ ಮಸೀದಪುರ, ರಾಮಕೃಷ್ಣ ಯಾದವ್,ತಿಪ್ಪಯ್ಯ ಭೋವಿ, ಶಿವಕುಮಾರ್ ವಸ್ತಾರ ಮೊದಲಾದವರು ಉಪಸ್ಥಿತರಿದ್ದರು.

Tags

Devdurga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X