ದೇವದುರ್ಗ | ಹೃದಯಾಘಾತದಿಂದ ಕಾರ್ಮಿಕ ಮೃತ್ಯು

ದೇವದುರ್ಗ : ತಾಲ್ಲೂಕಿನ ಚಿಂಚೋಡಿ ಗ್ರಾಮದ ನಾಗಪ್ಪ ತಂದೆ ಮರಿಯಪ್ಪ (56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನರೇಗಾ ಯೋಜನೆಯಡಿ ಕಾಲುವೆ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ನಾಗಪ್ಪ ಅವರಿಗೆ ಆಕಸ್ಮಿಕವಾಗಿ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಜಾಲಹಳ್ಳಿ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತುಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Next Story




