Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ತಾಯಿ ಮತ್ತು ಮಕ್ಕಳ...

ರಾಯಚೂರು ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ರಾಜ್ಯಕ್ಕೆ ಮಾದರಿಯಾಗಿ ರೂಪಿಸಿ: ಸಚಿವ ಯು.ಟಿ.ಖಾದರ್

ಬಾವಸಲಿ ರಾಯಚೂರು/ವಾರ್ತಾಭಾರತಿಬಾವಸಲಿ ರಾಯಚೂರು/ವಾರ್ತಾಭಾರತಿ29 Nov 2026 10:00 PM IST
share
ರಾಯಚೂರು ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ರಾಜ್ಯಕ್ಕೆ ಮಾದರಿಯಾಗಿ ರೂಪಿಸಿ: ಸಚಿವ ಯು.ಟಿ.ಖಾದರ್

ರಾಯಚೂರು: ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಜಿಲ್ಲೆಗೆ ಮಾತ್ರವಲ್ಲದೆ ಇಡೀ ಕರ್ನಾಟಕ ರಾಜ್ಯಕ್ಕೇ ಮಾದರಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ವೈದ್ಯರು ಮತ್ತು ಸಿಬ್ಬಂದಿ ಶ್ರಮಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವ ಯು.ಟಿ.ಖಾದರ್ ಹೇಳಿದರು.

ನ.29ರಂದು ರಾಯಚೂರು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ವತಿಯಿಂದ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ರಾಯಚೂರು ನಗರ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕೇವಲ ಇಬ್ಬರು ಪ್ರಸೂತಿ ತಜ್ಞರಿದ್ದರೂ ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 280ಕ್ಕೂ ಅಧಿಕ ಹೆರಿಗೆಗಳು ಯಶಸ್ವಿಯಾಗಿ ನಡೆಯುತ್ತಿವೆ. ಸರಾಸರಿ ದಿನಕ್ಕೆ ಐದರಿಂದ ಆರು ಹೆರಿಗೆಗಳು ನಡೆಯುತ್ತಿರುವುದು ಶ್ಲಾಘನೀಯ. ಇದಕ್ಕಾಗಿ ಶಾಸಕರು, ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ತಿಳಿಸಿದರು. ಗಂಗಾವತಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಾದರಿಯಲ್ಲಿಯೇ ಇಲ್ಲಿಯೂ ಒಳಾಂಗಣ ವಿನ್ಯಾಸ ಹಾಗೂ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕು ಮಟ್ಟದಲ್ಲಿ ಆರೋಗ್ಯ ಸೇವೆ ಬಲವರ್ಧನೆ: ಜಿಲ್ಲಾ ಆಸ್ಪತ್ರೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ರಾಜ್ಯದ ಎಲ್ಲಾ ತಾಲೂಕು ಮಟ್ಟದಲ್ಲಿ ಐದು ಹಾಸಿಗೆಗಳ ತೀವ್ರ ನಿಗಾ ಘಟಕ (ಐಸಿಯು) ಹಾಗೂ ಟೆಲಿಮೆಡಿಸಿನ್ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಸಣ್ಣಪುಟ್ಟ ಕಾಯಿಲೆಗಳಿಗೆ ತಾಲೂಕು ಮಟ್ಟದಲ್ಲಿಯೇ ಚಿಕಿತ್ಸೆ ದೊರೆಯುವಂತಾಗಬೇಕು ಎಂದು ಹೇಳಿದರು.

ಹೊಸ ಜಿಲ್ಲಾ ಆಸ್ಪತ್ರೆ ನಿರ್ಮಾಣದ ಭರವಸೆ: ರಾಯಚೂರು ಜಿಲ್ಲಾ ಆಸ್ಪತ್ರೆಯನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಹೊಸ ಜಿಲ್ಲಾ ಆಸ್ಪತ್ರೆ ನಿರ್ಮಿಸುವ ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತು ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕೆಕೆಆರ್‌ಡಿಬಿ ಸಹಯೋಗದೊಂದಿಗೆ ಶೀಘ್ರದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಜನಜಾಗೃತಿ ಮತ್ತು ಪೌಷ್ಟಿಕ ಆಹಾರಕ್ಕೆ ಒತ್ತು: ಆರೋಗ್ಯ ಇಲಾಖೆಯ ಸಿಬ್ಬಂದಿ ಕೇವಲ ಚಿಕಿತ್ಸೆ ನೀಡುವುದಕ್ಕೆ ಸೀಮಿತವಾಗದೆ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು. ಹೆರಿಗೆಗೆ ಬರುವ ತಾಯಂದಿರಿಗೆ ಮಕ್ಕಳಿಗೆ ನೀಡಬೇಕಾದ ಪೌಷ್ಟಿಕ ಆಹಾರದ ಕುರಿತು (ಡಯಟ್ ಚಾರ್ಟ್) ಅರಿವು ಮೂಡಿಸಬೇಕು. ಬಾಲ್ಯದಿಂದಲೇ ಸಕ್ಕರೆ ಹಾಗೂ ಎಣ್ಣೆ ಪದಾರ್ಥಗಳ ಬಳಕೆಯನ್ನು ಮಿತಿಗೊಳಿಸುವುದರಿಂದ ಭವಿಷ್ಯದಲ್ಲಿ ಎದುರಾಗಬಹುದಾದ ಹೃದಯ, ಕಿಡ್ನಿ ಹಾಗೂ ಮಧುಮೇಹದಂತಹ ಕಾಯಿಲೆಗಳನ್ನು ತಡೆಯಬಹುದು ಎಂದು ತಿಳಿಸಿದರು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಧರ್ಮಸಿಂಗ್ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ರಾಜ್ಯ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕಳೆದ ಮೂರೂವರೆ ವರ್ಷಗಳಲ್ಲಿ ಸುಮಾರು 873 ಕೋಟಿ ರೂ. ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲಾಗುತ್ತಿದೆ ಎಂದರು.

ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಯು.ಟಿ. ಖಾದರ್ ಅವರು ಆರೋಗ್ಯ ಇಲಾಖೆಯ ಸುಧಾರಣೆಗೆ ಹೆಚ್ಚಿನ ಕಾಳಜಿ ವಹಿಸಿ ಹಲವಾರು ಜನಪರ ಕೆಲಸಗಳನ್ನು ಮಾಡಿದ್ದಾರೆ. ‘ಆರೋಗ್ಯ ಆವಿಷ್ಕಾರ’ ಯೋಜನೆಯಡಿ ಜಿಲ್ಲೆಯ ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಯಚೂರು ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಇನ್ನಷ್ಟು ಕೊಡುಗೆಗಳನ್ನು ನೀಡುವಂತೆ ಆರೋಗ್ಯ ಸಚಿವರಲ್ಲಿ ಮನವಿ ಮಾಡಿದ್ದಾಗಿ ತಿಳಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಜಿಲ್ಲೆಯ ಆರೋಗ್ಯ ಕ್ಷೇತ್ರದ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ 20 ಕೋಟಿ ರೂ. ಅನುದಾನದಲ್ಲಿ ನಗರ ಸಮುದಾಯ ಆರೋಗ್ಯ ಕೇಂದ್ರದ ಭೂಮಿಪೂಜೆ ನೆರವೇರಿಸಲಾಗಿದೆ. ಕಟ್ಟಡದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಆರೋಗ್ಯ ಕೇಂದ್ರವನ್ನು ಕಾರ್ಯಾರಂಭಗೊಳಿಸಬೇಕು ಎಂದು ಹೇಳಿದರು.

ರಾಯಚೂರು ಜಿಲ್ಲೆಗೆ ಪ್ರತ್ಯೇಕ ಜಿಲ್ಲಾ ಆಸ್ಪತ್ರೆಯ ಅಗತ್ಯವಿದೆ. ಸುಮಾರು 7.5 ಲಕ್ಷದಿಂದ 8 ಲಕ್ಷ ಜನಸಂಖ್ಯೆ ಹೊಂದಿರುವ ರಾಯಚೂರು ತಾಲೂಕಿನಲ್ಲಿ ಪ್ರತ್ಯೇಕ ಜಿಲ್ಲಾ ಆಸ್ಪತ್ರೆ ಅಥವಾ ತಾಲೂಕು ಆಸ್ಪತ್ರೆಯ ಕೊರತೆಯಿದೆ. ಇದರಿಂದ ರಿಮ್ಸ್ ಆಸ್ಪತ್ರೆಯ ಮೇಲೆ ಹೆಚ್ಚಿನ ಒತ್ತಡ ಉಂಟಾಗುತ್ತಿದೆ. ಅಲ್ಲದೆ, ತೆಲಂಗಾಣ, ಯಾದಗಿರಿ ಹಾಗೂ ಆಂಧ್ರಪ್ರದೇಶಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಇಲ್ಲಿಗೆ ಬರುತ್ತಿದ್ದಾರೆ ಎಂದು ತಿಳಿಸಿದರು.

ಜಾಗೃತಿ ಭಿತ್ತಿಪತ್ರ ಬಿಡುಗಡೆ: ಕಾರ್ಯಕ್ರಮದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಭಿತ್ತಿಪತ್ರಗಳನ್ನು ಗಣ್ಯರು ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ನಿವೃತ್ತಿ ಹೊಂದುತ್ತಿರುವ ಸಿಬ್ಬಂದಿಯನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಭೂಮಿಪೂಜೆ ನೆರವೇರಿಸಿದ ಬಳಿಕ ಸಚಿವರು ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಅಕ್ಕ ಕೆಫೆಗೂ ಭೇಟಿ ನೀಡಿ ವ್ಯವಸ್ಥೆಗಳನ್ನು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಭೋಸರಾಜು, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರುದ್ರಪ್ಪ ಅಂಗಡಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪವನ್ ಕುಮಾರ್ ಕಿಶೋರ್, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಿತಾ ಎಂ.ಎನ್., ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಎಂ.ಡಿ. ಶಾಕೀರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವಿಜಯಶಂಕರ್, ಡಾ. ಶಂಕರಗೌಡ ಪಾಟೀಲ್, ಡಾ. ಗಣೇಶ, ತಾಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮೀಕಾಂತ್ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

RaichurHospitalstateU.T.Khader
share
ಬಾವಸಲಿ ರಾಯಚೂರು/ವಾರ್ತಾಭಾರತಿ
ಬಾವಸಲಿ ರಾಯಚೂರು/ವಾರ್ತಾಭಾರತಿ

ಬಾವಸಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X