ಧರ್ಮಸ್ಥಳ ಸರಣಿ ಹತ್ಯೆ ಆರೋಪ | ನಿಷ್ಪಕ್ಷ ತನಿಖೆ ನಡೆಸಲು ಒತ್ತಾಯಿಸಿ ಎಐಡಿವೈಓದಿಂದ ಪ್ರತಿಭಟನೆ

ರಾಯಚೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಕುರಿತ ತನಿಖೆಯನ್ನು ನಿಷ್ಪಕ್ಷವಾಗಿ ನಡೆಸಬೇಕು ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಷನ್ (ಎಐಡಿವೈಓ) ಸಂಘಟನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಳೇ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಈಗ ನಡೆಯುತ್ತಿರುವ ತನಿಖೆಯನ್ನು ಯಾವುದೇ ರಾಜಕೀಯ ಅಥವಾ ಧಾರ್ಮಿಕ ಪ್ರಭಾವಕ್ಕೆ ಒಳಗಾಗದೆ ಎಸ್‍ಐಟಿ ನಿಷ್ಪಕ್ಷವಾಗಿ ತನಿಖೆ ನಡೆಸಬೇಕು, ತಪ್ಪಿತಸ್ಥರು ಎಷ್ಟೇ ಪ್ರಭಾವಿತರಾಗಿದ್ದರೂ ಹಾಗೂ ಯಾವುದೇ ರೀತಿಯ ಉನ್ನತ ಸ್ಥಾನದಲ್ಲಿದ್ದರೂ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಈ ಕುರಿತಾಗಿ ವರದಿ ಮಾಡುತ್ತಿರುವ ಸಾಮಾಜಿಕ ಮಾಧ್ಯಮಗಳ ವರದಿಗಾರರ ಮೇಲೆ ಹಲ್ಲೆಗೈದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷರಾದ ಚನ್ನಬಸವ ಜಾನೇಕಲ್ ಜಿಲ್ಲಾ ಕಾರ್ಯದರ್ಶಿ ವಿನೋದ್ ಕುಮಾರ್ ಜಿಲ್ಲಾ ಸಮಿತಿ ಸದಸ್ಯರಾದ ಸಂದೀಪ್, ಕೃಷ್ಣ ಮನ್ಸಲಾಪುರ, ಶ್ರೀಕಾಂತ್, ಶಿವಪ್ಪ ಅಸ್ಕಿಹಾಳ, ನೂರ್‍ಪಾಶಾ,ರಾಜು ಮಲಿಯಾಬಾದ್, ಉದಂಯಕುಮಾರ್, ಗಣೇಶ್, ಭೀಮಣ್ಣ, ವೀರೇಶ್‍ಬಾಬು, ವೀರಭದ್ರಯ್ಯ, ಬಶೀರ್ ಅಹ್ಮದ್ ಹೊಸಮನಿ ಹಾಗೂ ಮತ್ತಿತರರಿದ್ದರು.





