Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಪರಿಶಿಷ್ಟ ಜಾತಿ, ಪಂಗಡದ ಸಮಸ್ಯೆಗಳಿಗೆ...

ಪರಿಶಿಷ್ಟ ಜಾತಿ, ಪಂಗಡದ ಸಮಸ್ಯೆಗಳಿಗೆ ತ್ವರಿತ ಪರಿಹಾರ: ಡಾ. ಮೂರ್ತಿ ಎಲ್.

ಆಯೋಗಕ್ಕೆ ಆನ್ ಲೈನ್ ನಲ್ಲಿ ದೂರು ನೀಡಲು ವೆಬ್‌ ಸೈಟ್ ರಚನೆಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ31 Aug 2026 7:03 PM IST
share
ಪರಿಶಿಷ್ಟ ಜಾತಿ, ಪಂಗಡದ ಸಮಸ್ಯೆಗಳಿಗೆ ತ್ವರಿತ ಪರಿಹಾರ: ಡಾ. ಮೂರ್ತಿ ಎಲ್.

ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮದ್ಯ, ಕೊಲೆ, ಅತ್ಯಾಚಾರ ಪ್ರಕರಣ ದಾಖಲಾಗಿದ್ದು ಜಿಲ್ಲೆಗೆ ನಾಚಿಕೆಯ ವಿಷಯ. ಎಸ್ ಸಿ, ಎಸ್ ಟಿ ಸಮುದಾಯದ ಜನರ ಸಮಸ್ಯೆ ಪರಿಹಾರಕ್ಕೆ ಒಂದು ತಿಂಗಳಲ್ಲಿ ಆನ್ ಲೈನ್ ನಲ್ಲಿ ದೂರಿ ಸಲ್ಲಿಸಲು ವೆಬ್ ಸೈಟ್ ರಚನೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ. ಮೂರ್ತಿ ಎಲ್. ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರು ಹೆಚ್ಚಾಗಿ ವಾಸವಾಗಿದ್ದಾರೆ. ಅಕ್ರಮ ಮದ್ಯ ಮಾರಾಟದ ನಡೆದು ಅಪರಾಧ ಚಟುವಟಿಕೆಗಳು ನಡೆಯುತ್ತಿದೆ.‌ ದಲಿತರ ಕೊಲೆ, ಅತ್ಯಾಚಾರ ಪ್ರಕರಣ ನಡೆದಿದ್ದು ನಾಚಿಕೆಗೇಡಿನ ವಿಚಾರ. ಜಿಲ್ಲಾಧಿಕಾರಿ ಪೂವಿತಾ ಎಸ್ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ದಲಿತರ ಹೋರಾಟ ಮಾಡುತ್ತಿದ್ದಾರೆ. ಆದರೂ ಸರಿಯಾದ ಫಲಿತಾಂಶ ಬರುತ್ತಿಲ್ಲ, ಸಂತ್ರಸ್ತರಿಗೆ ನ್ಯಾಯ ಸಿಗುತ್ತಿಲ್ಲ ಎಲ್ಲಿ ಲೋಪವಾಗಿದೆ ಎಂಬುವುದನ್ನು ಪರಿಶೀಲಿಸಬೇಕು. ಇದಕ್ಕೆ ಚುಚ್ಚುಮದ್ದು ಹಾಕಬೇಕು. 6 ತಿಂಗಳಲ್ಲಿ ಪರಿಸ್ಥಿತಿ ಬದಲಾಗಬೇಕು ಇದಕ್ಕೆ ಸರಿಯಾಗಿ ಕೆಲಸ ಮಾಡುತ್ತೇನೆ ಎಂದು ಡಿ.ಸಿ. ಅವರು ಹೇಳಿದ್ದಾರೆ ಆಡಳಿತ ವ್ಯವಸ್ಥೆ ಸರಿಪಡಿಸಲು ಎಲ್ಲರೂ ಕೈಜೋಡಿಸಬೇಕು ಆಯೋಗದಿಂದ ಕಾಲಕಾಲಕ್ಕೆ ಪರಿಶೀಲನೆ ಮಾಡುತ್ತೇವೆಂದು ಹೇಳಿದರು.

ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗವು ಕಳೆದ ಒಂಬತ್ತು ತಿಂಗಳಲ್ಲಿ ರಾಜ್ಯದ 18 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕಲ್ಪಿಸಲು ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

‘ಆಯೋಗಕ್ಕೆ ಬಂದಿರುವ ಪ್ರಕರಣಗಳ ಪೈಕಿ ಸುಮಾರು 900 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ನ್ಯಾಯಾಲಯದ ಮೂಲಕ ಇತ್ಯರ್ಥವಾಗಬೇಕಾದ ಪ್ರಕರಣಗಳ ಜೊತೆಗೆ ಜಿಲ್ಲೆಗಳ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ತ್ವರಿತವಾಗಿ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುತ್ತಿದೆ. ಸಣ್ಣಪುಟ್ಟ ಲೋಪಗಳಿಂದ ಹಿಡಿದು ಗಂಭೀರ ಸಮಸ್ಯೆಗಳವರೆಗೆ ಗಮನ ಹರಿಸಲಾಗುವುದು. ಆಯೋಗ ಸದಾ ನಿಮ್ಮೊಂದಿಗೆ ಇರಲಿದೆ’ ಎಂದು ಹೇಳಿದರು.

ಜಿಲ್ಲೆಯಲ್ಲಿ ನಡೆದಿರುವ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ಕುರಿತು ಜಿಲ್ಲಾಡಳಿತದಿಂದ ಮಾಹಿತಿ ಪಡೆದುಕೊಂಡಿದ್ದು, ತಾವು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿಸಿದರು.

ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ:

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿ ನಿಲಯಗಳ ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗುವುದು. ಅಧಿಕಾರಿಗಳು ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಅಮಾನತು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

‘ಕೊಲೆ, ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಿರುವುದು ನಾಚಿಕೆ ಹಾಗೂ ನೋವಿನ ಸಂಗತಿ. ಇಂತಹ ಪ್ರಕರಣಗಳು ಮರುಕಳಿಸಿದರೆ ಜಿಲ್ಲಾಡಳಿತವೇ ನೇರ ಹೊಣೆಗಾರವಾಗಲಿದೆ’ ಎಂದು ಹೇಳಿದರು.


ಕೊಲೆ, ಅತ್ಯಾಚಾರ ಪ್ರಕರಣಗಳ ಸಿಐಡಿ ತನಿಖೆಗೆ ಒತ್ತಾಯ:

ರವೀಂದ್ರ ಜಲ್ದಾರ್ ಮಾತನಾಡಿ, ಜಿಲ್ಲೆಯಲ್ಲಿ ನಡೆದಿರುವ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಬೇಕು. ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಜು ಮಾತನಾಡಿ, ಜಿಲ್ಲೆಯಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಮಾರಾಟ ಹೆಚ್ಚಾಗಿದೆ. ಮಾನವ ಸೇವನೆಗೆ ಯೋಗ್ಯವಲ್ಲದ ಹಾಗೂ ಅಪಾಯಕಾರಿಯಾದ ವಿಷಪೂರಿತ ರಾಸಾಯನಿಕ ಮಿಶ್ರಿತ ಸೇಂದಿಯನ್ನು ಕೆಲ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಸಣ್ಣ ವಯಸ್ಸಿನವರೂ ಇದನ್ನು ಸೇವಿಸಿ ಸಾವಿಗೀಡಾಗುತ್ತಿರುವ ಘಟನೆಗಳು ನಡೆಯುತ್ತಿವೆ. ಅಕ್ರಮ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಮದ್ಯ ಮಾರಾಟವೂ ಹೆಚ್ಚಾಗಿದ್ದು, ಮದ್ಯ ಮಾರಾಟದ ಪರವಾನಗಿಗಳನ್ನು ರದ್ದುಪಡಿಸುವಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಅಬಕಾರಿ ಇಲಾಖೆಗೆ ಒತ್ತಾಯಿಸಿದರು.


ವಸತಿ ನಿಲಯಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ಶಾರದಾ ಹುಲಿ ನಾಯಕ ಮಾತನಾಡಿ, ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ವಸತಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ವಿದ್ಯುತ್ ಸಮಸ್ಯೆ, ಸಿಸಿಟಿವಿ ಕ್ಯಾಮೆರಾ ಕೊರತೆ ಸೇರಿದಂತೆ ಹಲವು ಮೂಲಸೌಕರ್ಯ ಸಮಸ್ಯೆಗಳಿವೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶಿಕ್ಷಣದ ದೃಷ್ಟಿಯಿಂದ ಕೂಡಲೇ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಮಸ್ಕಿಯ ವಾಲ್ಮೀಕಿ ಭವನವನ್ನು ವಿವಿಧ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲಾಗುತ್ತಿದ್ದು, ಅದನ್ನು ತೆರವುಗೊಳಿಸಿ ವಾಲ್ಮೀಕಿ ಸಮುದಾಯದ ಬಳಕೆಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಲಾಯಿತು.

ನವಲಕಲ್ ಮಾತನಾಡಿ, ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಕೆಲಸಕ್ಕೆ ತೆರಳಿ ಸುರಕ್ಷಿತವಾಗಿ ಮನೆಗೆ ಮರಳುವ ವಿಶ್ವಾಸ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಗಳಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪೂವಿತಾ, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ, ಆಯೋಗದ ಸದಸ್ಯರಾದ ಸುನೀಲ ಎಂ. ಉಕ್ಕಲಿ, ಎನ್. ದಿವಾಕರ್, ಕಾರ್ಯದರ್ಶಿ ಎಚ್.ಎಸ್. ಶಿವರಾಮು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಶಾವಂತಗೇರಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

Dr. MurthySC/ST
share
ವಾರ್ತಾಭಾರತಿ
ವಾರ್ತಾಭಾರತಿ
Next Story
X