Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ಜಿಲ್ಲೆಯಲ್ಲಿ ಕೇಂದ್ರ ತಂಡದಿಂದ...

ರಾಯಚೂರು ಜಿಲ್ಲೆಯಲ್ಲಿ ಕೇಂದ್ರ ತಂಡದಿಂದ ಬರ ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ4 Oct 2026 11:49 PM IST
share
ರಾಯಚೂರು ಜಿಲ್ಲೆಯಲ್ಲಿ ಕೇಂದ್ರ ತಂಡದಿಂದ ಬರ ಸಮೀಕ್ಷೆ

ರಾಯಚೂರು : ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಡಾ. ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ ತಂಡವು ರವಿವಾರ (ಅ.4) ರಾಯಚೂರು ಜಿಲ್ಲೆಯಲ್ಲಿ ಬರ ಸಮೀಕ್ಷೆ ನಡೆಸಿತು.

ಭಾರತ ಸರ್ಕಾರದ ವೆಚ್ಚ ಇಲಾಖೆಯ ಅಧೀನ ಕಾರ್ಯದರ್ಶಿ ಪಾರ್ಥ ಪಾಲ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ರಾಕೇಶ್ ಕುಮಾರ್ ತಂಡದಲ್ಲಿದ್ದರು. ದೇವದುರ್ಗ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಕೃಷಿ, ತೋಟಗಾರಿಕೆ, ಪಶುಪಾಲನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ತಂಡವು ಜಿಲ್ಲೆಯಲ್ಲಿ ಆಗಿರುವ ಮಳೆಯ ಪ್ರಮಾಣ, ಬರದಿಂದ ಉಂಟಾದ ಬೆಳೆ ಹಾನಿ, ಕ್ರಾಪ್ ಕಟಿಂಗ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡಿತು.

ಸಭೆಯ ಬಳಿಕ ತಂಡವು ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮದ ಹೊಲಗಳಿಗೆ ಭೇಟಿ ನೀಡಿ ಅನಾವೃಷ್ಟಿಯಿಂದ ಹಾನಿಗೊಳಗಾದ ಹತ್ತಿ ಹಾಗೂ ಮೆಣಸಿನಕಾಯಿ ಬೆಳೆಗಳನ್ನು ವೀಕ್ಷಿಸಿ ರೈತರಿಂದ ಮಾಹಿತಿ ಪಡೆದುಕೊಂಡಿತು. ಬಳಿಕ ಎನ್. ಗಣೇಕಲ್ ಗ್ರಾಮದ ಹೊಲದಲ್ಲಿ ಹತ್ತಿ ಬೆಳೆ ಹಾನಿಯನ್ನು ಪರಿಶೀಲಿಸಿ ರೈತರೊಂದಿಗೆ ಚರ್ಚಿಸಿತು.

ಈ ವೇಳೆ ರೈತರು, ಈ ವರ್ಷ ಮಳೆ ಬಾರದ ಕಾರಣ ಜಮೀನಿನಲ್ಲಿ ಹಾಕಿದ ಬೀಜ, ಗೊಬ್ಬರದ ಖರ್ಚು ಕೂಡ ವಾಪಸ್ ಬಾರದಂತಾಗಿದೆ. ಪ್ರತಿ ವರ್ಷ ಎಕರೆಗೆ 12ರಿಂದ 15 ಕ್ವಿಂಟಾಲ್ ಹತ್ತಿ ಬೆಳೆಯುತ್ತಿತ್ತು. ಆದರೆ ಈ ವರ್ಷ ಎಕರೆಗೆ ಕೇವಲ 2ರಿಂದ 3 ಕ್ವಿಂಟಾಲ್ ಮಾತ್ರ ಇಳುವರಿ ಬಂದಿದೆ. ಇದರಿಂದ ಭಾರಿ ನಷ್ಟವಾಗಿದ್ದು, ಬರಗಾಲದಿಂದ ಗ್ರಾಮದ ಜನರು ಬೇರೆಡೆಗೆ ಗುಳೆ ಹೋಗುತ್ತಿದ್ದಾರೆ. ಪ್ರತಿ ಎಕರೆಗೆ 50 ಸಾವಿರ ರೂ. ಬರ ಪರಿಹಾರ ನೀಡಬೇಕು ಎಂದು ಕೇಂದ್ರ ತಂಡಕ್ಕೆ ಮನವಿ ಮಾಡಿದರು.

ನಂತರ ತಂಡವು ಗಣೇಕಲ್ ಜಲಾಶಯಕ್ಕೆ ಭೇಟಿ ನೀಡಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯನ್ನು ವೀಕ್ಷಿಸಿತು. ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಂದ ಕಾಮಗಾರಿ ಹೇಗೆ ನಡೆಯುತ್ತಿದೆ, ಇದರಿಂದ ತಮಗಾಗುತ್ತಿರುವ ಅನುಕೂಲ ಹಾಗೂ ಇತರ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡಿತು.

ಈ ವೇಳೆ ಕಾರ್ಮಿಕರು, ಪ್ರಸ್ತುತ ದಿನಕ್ಕೆ 375 ರೂ. ಕೂಲಿ ನೀಡಲಾಗುತ್ತಿದೆ. ಹೊರಗಡೆ ಕೆಲಸಕ್ಕೆ ಹೋದರೆ ದಿನಕ್ಕೆ 700 ರೂ.ರಿಂದ 800 ರೂ. ರವರೆಗೆ ಕೂಲಿ ದೊರೆಯುತ್ತದೆ. ಆದ್ದರಿಂದ ಕೂಲಿ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ರಾಯಚೂರು ಜಿಲ್ಲೆಯ ಮಸರಕಲ್, ಎನ್. ಗಣೇಕಲ್, ಮಂದಕಲ್, ಯರಡೋಣ ಸೇರಿದಂತೆ ವಿವಿಧೆಡೆ ಬರ ಸಮೀಕ್ಷೆ ನಡೆಸಿ ರೈತರ ಸಮಸ್ಯೆಗಳನ್ನು ಆಲಿಸಲು ಬಂದಿದ್ದೇವೆ. ರೈತರ ಜಮೀನುಗಳಲ್ಲಿ ಆಗಿರುವ ಬೆಳೆ ಹಾನಿಯ ಮಾಹಿತಿಯನ್ನು ಪರಿಶೀಲಿಸಲಾಗಿದೆ. ಈ ಕುರಿತು ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕೇಂದ್ರ ತಂಡದ ಸದಸ್ಯರು ರೈತರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕಾರ್ಯದರ್ಶಿ ಗಿರೀಶ್ ಆರ್., ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ, ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ ಚವ್ಹಾಣ, ದೇವದುರ್ಗ ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

RaichurCentral Teamdrought
share
ವಾರ್ತಾಭಾರತಿ
ವಾರ್ತಾಭಾರತಿ
Next Story
X