ರಾಯಚೂರು, ಕೊಪ್ಪಳ ಜಿಲ್ಲೆಗಳ ಪ್ರಕೃತಿ ವಿಕೋಪ ಉಸ್ತುವಾರಿಯಾಗಿ ಡಾ.ಶರಣಪ್ರಕಾಶ್ ಪಾಟೀಲ್ ನೇಮಕ

ರಾಯಚೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲ್ವಿಚಾರಣೆಯನ್ನು ಸಮರ್ಪಕವಾಗಿ ನಡೆಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಜಿಲ್ಲಾವಾರು ಉಸ್ತುವಾರಿ ಜವಾಬ್ದಾರಿಯನ್ನು ಸಚಿವರಿಗೆ ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ.
ಈ ಅಧಿಸೂಚನೆಯ ಪ್ರಕಾರ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಪ್ರಕೃತಿ ವಿಕೋಪ ನಿರ್ವಹಣೆಯ ಉಸ್ತುವಾರಿಯಾಗಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.
ಮುಂದಿನ ಆದೇಶದವರೆಗೆ ಆಯಾ ಸಚಿವರುಗಳಿಗೆ ವಹಿಸಲಾದ ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳ ಮೇಲ್ವಿಚಾರಣೆ ಹಾಗೂ ಸಮನ್ವಯದ ಜವಾಬ್ದಾರಿ ಇರಲಿದೆ ಎಂದು ಸರ್ಕಾರ ತಿಳಿಸಿದೆ.
ರಾಜ್ಯದಲ್ಲಿ ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳು, ತುರ್ತು ಪರಿಸ್ಥಿತಿಗಳ ನಿರ್ವಹಣೆ ಹಾಗೂ ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಈ ಸಂಬಂಧ ರಾಜ್ಯಪಾಲರ ಆದೇಶಾನುಸಾರ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
Next Story




