ಶೇಂಗಾ ಉತ್ಪನ್ನ ಖರೀದಿಸಲು ಖರೀದಿ ಕೇಂದ್ರಗಳ ಸ್ಥಾಪನೆ: ಜಿಲ್ಲಾಧಿಕಾರಿ ನಿತೀಶ್ ಕೆ.

ಜಿಲ್ಲಾಧಿಕಾರಿ ನಿತೀಶ್ ಕೆ.
ರಾಯಚೂರು : ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿನಲ್ಲಿ ಎಫ್ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ಸರ್ಕಾರದ ಆದೇಶದಂತೆ, 2025-26ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಶೇಂಗಾ ಉತ್ಪನ್ನವನ್ನು ಪ್ರತಿ ಎಕರಿಗೆ 3.00 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಎಫ್ಎಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್ಗೆ ₹7,263ರಂತೆ ಖರೀದಿಸಲಾಗುವುದು. ದಿನಾಂಕ 29-09-2025ರಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಲಾಗಿದೆ.
ರಾಯಚೂರು ತಾಲೂಕಿನ ಹುಣಸಿಹಾಳಹುಡಾ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ (ಮೊಬೈಲ್: 9743695467), ಸಿಂಧನೂರು ತಾಲೂಕಿನ ಜವಳಗೇರಾ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ (ಮೊಬೈಲ್: 9964165509), ಹುಡಾ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ (ಮೊಬೈಲ್: 9964315868), ಲಿಂಗಸುಗೂರ ತಾಲೂಕಿನ ಮಟ್ಟೂರು ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ (ಮೊಬೈಲ್: 7337773317), ಮೆದಕಿನಾಳ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ (ಮೊಬೈಲ್: 9663704921), ನಾಗರಾಳ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ (ಮೊಬೈಲ್: 7483685720), ಮಾನವಿ ತಾಲೂಕಿನ ತೋರಣದಿನ್ನಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ (ಮೊಬೈಲ್: 9902387316), ದೇವದುರ್ಗ ತಾಲೂಕಿನ ಜಾಲಹಳ್ಳಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ (ಮೊಬೈಲ್: 7899312989), ಸಿರವಾರ ತಾಲೂಕಿನ ಸಿರವಾರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ (ಮೊಬೈಲ್: 9880891919)ಗೆ ರೈತರು ಸಂಪರ್ಕ ಮಾಡಬಹುದು.
ಶೇಂಗಾ ಮಾರಾಟ ಮಾಡುವ ಸಂಬಂಧ ರೈತರು ತಮ್ಮ FRUITS ID ಸಹಿತ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಿ ಸರ್ಕಾರದ ಯೋಜನೆಯ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.







