Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಡಿಎಪಿ ರಸಗೊಬ್ಬರ ಕೊರತೆ ಖಂಡಿಸಿ ರೈತರ...

ಡಿಎಪಿ ರಸಗೊಬ್ಬರ ಕೊರತೆ ಖಂಡಿಸಿ ರೈತರ ಆಕ್ರೋಶ; ಸಮರ್ಪಕ ಪೂರೈಕೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ31 July 2026 2:26 PM IST
share
ಡಿಎಪಿ ರಸಗೊಬ್ಬರ ಕೊರತೆ ಖಂಡಿಸಿ ರೈತರ ಆಕ್ರೋಶ;  ಸಮರ್ಪಕ ಪೂರೈಕೆಗೆ ಆಗ್ರಹ

ರಾಯಚೂರು, ಜು.31: ಮುಂಗಾರು ಮಳೆ ಉತ್ತಮವಾಗಿದ್ದರೂ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಡಿಎಪಿ ಸೇರಿದಂತೆ ರಸಗೊಬ್ಬರಗಳು ದೊರೆಯುತ್ತಿಲ್ಲ ಎಂದು ಆರೋಪಿಸಿ ನೂರಾರು ರೈತರು ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿರುವ ರಾಯಚೂರು ಒಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರಿ ಸಂಘ ನಿಯಮಿತ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿರುವ ಈ ಸಂದರ್ಭದಲ್ಲಿ ಡಿಎಪಿ ರಸಗೊಬ್ಬರದ ಬೇಡಿಕೆ ಹೆಚ್ಚಾಗಿದೆ. ಆದರೆ ರೈತರಿಗೆ ಅಗತ್ಯವಿರುವಷ್ಟು ಗೊಬ್ಬರ ನೀಡದೇ, ಟೋಕನ್ ವ್ಯವಸ್ಥೆ ಮೂಲಕ ಕೇವಲ 100 ಚೀಲಗಳನ್ನು ಮಾತ್ರ ವಿತರಿಸಲಾಗುತ್ತಿದೆ. ಉಳಿದ ರೈತರು ಎಲ್ಲಿಗೆ ಹೋಗಬೇಕು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಡಿಎಪಿ ಖರೀದಿಸುವ ರೈತರಿಗೆ ಅನಿವಾರ್ಯವಾಗಿ ನ್ಯಾನೋ ಯೂರಿಯಾ (₹220) ಖರೀದಿಸುವಂತೆ ಹೇಳಲಾಗುತ್ತಿದೆ ಎಂದು ರೈತರು ದೂರಿದರು. ಕೇಂದ್ರ ಸರ್ಕಾರದ ಆದೇಶದ ಪ್ರಕಾರ ಯಾವುದೇ ರಸಗೊಬ್ಬರದೊಂದಿಗೆ ಮತ್ತೊಂದು ಉತ್ಪನ್ನವನ್ನು ಕಡ್ಡಾಯವಾಗಿ ಜೋಡಿಸಿ (ಅಟ್ಯಾಚ್ ಮಾಡಿ) ಮಾರಾಟ ಮಾಡಬಾರದು. ಈ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ಧ ಕೃಷಿ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೆಲವು ಆಯ್ದ ರೈತರಿಗೆ ಮಾತ್ರ ರಸಗೊಬ್ಬರ ವಿತರಣೆ ಮಾಡಲಾಗುತ್ತಿದ್ದು, ಸಾಮಾನ್ಯ ರೈತರು ದಿನಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಡಿಎಪಿ ಕೊರತೆಯಿಂದ ಬಿತ್ತನೆ ಮತ್ತು ಬೆಳೆ ನಿರ್ವಹಣೆಗೆ ತೊಂದರೆಯಾಗುತ್ತಿದ್ದು, ಸರ್ಕಾರ ಕೂಡಲೇ ಅಗತ್ಯ ಪ್ರಮಾಣದ ರಸಗೊಬ್ಬರವನ್ನು ಜಿಲ್ಲೆಗೆ ಪೂರೈಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ವೇಳೆ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ರೈತರ ಅಹವಾಲು ಆಲಿಸಿ, ಸಮಸ್ಯೆಯನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಶೀಘ್ರದಲ್ಲೇ ಅಗತ್ಯ ಪ್ರಮಾಣದ ಡಿಎಪಿ ಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಆದಾಗ್ಯೂ, ಭರವಸೆ ಈಡೇರದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.

Tags

FarmersprotestDAP fertilizer
share
ವಾರ್ತಾಭಾರತಿ
ವಾರ್ತಾಭಾರತಿ
Next Story
X