Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರಿನಲ್ಲಿ ಸಂಭ್ರಮದ ‘ಈದುಲ್ ಫಿತ್ರ್’...

ರಾಯಚೂರಿನಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ವಾರ್ತಾಭಾರತಿವಾರ್ತಾಭಾರತಿ21 March 2026 5:32 PM IST
share
ರಾಯಚೂರಿನಲ್ಲಿ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ರಾಯಚೂರು : ಈದುಲ್ ಫಿತ್ರ್ ಹಬ್ಬದ ಅಂಗವಾಗಿ ನಗರದ ಅರಬ್ ಮೊಹಲ್ಲಾ ಹಾಗೂ ಯಕ್ಲಾಸಪೂರು ಬಡಾವಣೆಯಲ್ಲಿನ‌ ಹೊಸ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ನಮಾಝ್ ಮಾಡಿ ಶ್ರದ್ಧಾ ಭಕ್ತಿಯಿಂದ ಹಬ್ಬ ಆಚರಿಸಿದರು.

ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಅರಬ್ ಮೊಹಲ್ಲಾ ಬಡಾವಣೆಯ ಈದ್ಗಾ ಮೈದಾನದಲ್ಲಿ 9 ಗಂಟೆಗೆ ಹಾಗೂ ಯಕ್ಲಾಸಪೂರ ಈದ್ಗಾ ಮೈದಾನದಲ್ಲಿ 8:30ರಿಂದ 9;30 ಗಂಟೆಯ ವರೆಗೆ ಪ್ರಾರ್ಥನೆ ಸಲ್ಲಿಸಿದರು.

ಇಸ್ಲಾಮಿಕ್ ಕ್ಯಾಂಲಡರ್ ನ ರಮಝಾನ್ ತಿಂಗಳ ಪೂರ್ತಿ ಉಪವಾಸ ಆಚರಿಸಿದ ಬಳಿಕ ಶವ್ವಾಲ್ ತಿಂಗಳ ಮೊದಲನೇ ದಿನ ಈ‌‌ ಹಬ್ಬ ಆವರಿಸಲಾಗುತ್ತಿದ್ದು ಸಾಮೂಹಿಕ ಪ್ರಾರ್ಥನೆಯಲ್ಲಿ ನಮಾಝ್‌ ಮಾಡಿ ರಮಝಾನ್ ಹಬ್ಬಕ್ಕೆ ತೆರೆ ಎಳೆದರು. ಮೌಲ್ವಿಗಳು ಕುರಾನ್ ಪಠಣ ಮಾಡಿದರು. ಸಾಮೂಹಿಕ ಪ್ರಾರ್ಥನೆ ನಂತರ ಪರಸ್ಪರ ಆಲಿಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದರು. ಬಿಸಿಲಿನ ತಾಪಮಾನ ಹೆಚ್ಚಾಗಿರುವ ಕಾರಣ ಕುಡಿಯುವ ನೀರು ಹಾಗೂ ಕೆಲವರು ತಂಪು ಪಾನೀಯ ವ್ಯವಸ್ಥೆ ಮಾಡಿದ್ದರು.

ಗಣ್ಯರಿಂದ ಶುಭಾಶಯ :

ಈದ್ಗಾ ಮೈದಾನದ ಬಳಿ ಹಾಕಿದ ಶಾಮಿಯಾನದಲ್ಲಿ ಸಚಿವ ಎನ್.ಎಸ್.ಬೋಸರಾಜು, ಸಂಸದ ಜಿ.ಕುಮಾರ ನಾಯಕ ಸೇರಿದಂತೆ ಗಣ್ಯರು ನಮಾಝ್‌ ಕಾರ್ಯಕ್ರಮ ಆಲಿಸುತ್ತಾ ನಂತರ ನೆರೆದ ಮುಸ್ಲಿಂ‌ ಬಾಂಧವರ ಜೊತೆಗೆ ಆಲಿಂಗನ ಮಾಡಿ ಈದ್ ಮುಬಾರಕ್ ಎನ್ನುತ್ತಾ ಶುಭ ಕೋರಿದರು.

ಅರಬ್ ಮೊಹಲ್ಲಾ ಬಳಿಕ ಈದ್ಗಾ ಮೈದಾನ ಚಿಕ್ಕದಾಗಿರುವ ಕಾರಣ ಜಿಲ್ಲಾ ನ್ಯಾಯಾಲಯದ ಮುಂಭಾಗದ ರಸ್ತೆಯ ಮೇಲೆ ನಮಾಝ್‌ ಮಾಡಲಾಗುತ್ತಿತ್ತು ಇದರಿಂದ ಕೆಲಕಾಲ ಸಂಚಾರಕ್ಕೆ ಸಮಸ್ಯೆಯಾಗಿತ್ತು ಹೀಗಾಗಿ ಮತ್ತೊಂದು ಈದ್ಗಾ ಮೈದಾನದ ಬೇಡಿಕೆಯಂತೆ ನಗರದ ಹೊರವಲಯದ ಯಕ್ಲಾಸಪೂರನಲ್ಲಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಕಳೆದ ವರ್ಷ ಅರೆಬರೆ ಕಾಮಗಾರಿ ಮಾಡಿದ್ದರೂ ನಮಾಝ್‌ ಮಾಡಲಾಗಿತ್ತು. ಈ ಬಾರಿ ಸಂಪೂರ್ಣವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು ಹೀಗಾಗಿ ವಾಹನ ನಿಲುಗಡೆಗಾಗಿ ಜಾಲಿ ಗಿಡಗಳನ್ನು ಸ್ವಚ್ಛಗೊಳಿಸಿ ಬೃಹತ್ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು.

Tags

RaichurEid-ul-Fitr
share
ವಾರ್ತಾಭಾರತಿ
ವಾರ್ತಾಭಾರತಿ
Next Story
X