ನ.28ರಂದು ಆಹಾರ ಸಚಿವ ರಿಝ್ವಾನ್ ಅರ್ಷದ್ ರಾಯಚೂರು ಪ್ರವಾಸ

ರಿಝ್ವಾನ್ ಅರ್ಷದ್
ರಾಯಚೂರು : ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಝ್ವಾನ್ ಅರ್ಷದ್ ಅವರು ನ.28ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 11.25ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಿರ್ಗಮಿಸಲಿರುವ ಅವರು, ಮಧ್ಯಾಹ್ನ 12.45ಕ್ಕೆ ಹೈದರಾಬಾದ್ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 3 ಗಂಟೆಗೆ ರಾಯಚೂರು ನಗರಕ್ಕೆ ತಲುಪಲಿದ್ದಾರೆ.
ಸಂಜೆ 4 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ರಾತ್ರಿ 7 ಗಂಟೆಗೆ ರಾಯಚೂರಿನ ಹೊಸ ಈದ್ಗಾ ಮೈದಾನದ ಉದ್ಘಾಟನೆ ಹಾಗೂ ಶಾದಿ ಮಹಲ್ ನಿರ್ಮಾಣದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ರಾತ್ರಿ 10 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ, ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




