Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಹುಟ್ಟು ಹಬ್ಬದ ವೇಳೆ ನವಿಲಿನ ಗರಿಯಿಂದ...

ಹುಟ್ಟು ಹಬ್ಬದ ವೇಳೆ ನವಿಲಿನ ಗರಿಯಿಂದ ತಯಾರಿಸಿದ ಹಾರ ಹಾಕಿಕೊಂಡ ಮಾಜಿ ಶಾಸಕ!; ಅರಣ್ಯ ಇಲಾಖೆಗೆ ದೂರು

ವಾರ್ತಾಭಾರತಿವಾರ್ತಾಭಾರತಿ16 July 2025 5:48 PM IST
share
ಹುಟ್ಟು ಹಬ್ಬದ ವೇಳೆ ನವಿಲಿನ ಗರಿಯಿಂದ ತಯಾರಿಸಿದ ಹಾರ ಹಾಕಿಕೊಂಡ ಮಾಜಿ ಶಾಸಕ!; ಅರಣ್ಯ ಇಲಾಖೆಗೆ ದೂರು

ರಾಯಚೂರು: ಜಿಲ್ಲೆಯ ಮಾಜಿ ಸಚಿವ ಶಿವನಗೌಡ ನಾಯಕ್ ಕೆ. ಅವರು ಸೋಮವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಾಗ ನವಿಲು ಗರಿಯಿಂದ ತಯಾರಿಸಿದ ಹಾರವನ್ನು ಸಾರ್ವಜನಿಕವಾಗಿ ಧರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಕಾರಣ ಅವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972ರ ಉಲ್ಲಂಘನೆಯ ಹಿನ್ನೆಲೆಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕನಕಪುರ ತಾಲೂಕಿನ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅರಣ್ಯ ಇಲಾಖೆಗೆ ದೂರು‌ ನೀಡಿದ್ದಾರೆ.

ಬೆಂಗಳೂರಿನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ದೂರು ನೀಡಿದ ಅವರು, ಶಿವನಗೌಡ ನಾಯಕ್ ಕೆ. ಅವರು ನವಿಲು ಗರಿಯಿಂದ ತಯಾರಿಸಲಾದ ಹಾರವನ್ನು ಧರಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಛಾಯಾಚಿತ್ರಗಳ ಮೂಲಕ ಸ್ಪಷ್ಟವಾಗಿ ದೃಢಪಟ್ಟಿದೆ. ಈ ಕೃತ್ಯವು ಭಾರತದ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972ರ ನಿಯಮಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ.

ನವಿಲು ಭಾರತದ ರಾಷ್ಟ್ರೀಯ ಪಕ್ಷಿ ಆಗಿದ್ದು, ಇದರ ಸಾಂಸ್ಕೃತಿಕ, ಪಾವಿತ್ರ್ಯ ಹಾಗೂ ಜೀವವೈವಿಧ್ಯದಲ್ಲಿ ಮಹತ್ವಪೂರ್ಣ ಸ್ಥಾನವಿದೆ. ನವಿಲು ಮತ್ತು ಇದರ ಎಲ್ಲಾ ಅಂಗಾಂಶಗಳು, ವಿಶೇಷವಾಗಿ ನವಿಲು ಗರಿಗಳು, Indian Wildlife (Protection) Act, 1972ರ ಅನ್ವಯ Schedule-l species , ಪಕ್ಷಿಯನ್ನು ಅಥವಾ ಇದರ ಅಂಗಾಂಶಗಳನ್ನು ಸಂಗ್ರಹಿಸುವುದು, ಉಳಿಸಿಕೊಳ್ಳುವುದು, ಪ್ರದರ್ಶಿಸುವುದು, ವ್ಯಾಪಾರ ಮಾಡುವುದು, ಅಥವಾ ಉಡುಗೊರೆ ರೂಪದಲ್ಲಿ ನೀಡುವುದು ಕಾನೂನಾತ್ಮಕವಾಗಿ ಸಂಪೂರ್ಣ ನಿಷಿದ್ಧವಾಗಿದೆ. ನವಿಲು ಗರಿಯನ್ನು ಯಾವುದೇ ರೀತಿಯ ಅನಧಿಕೃತ ಉಪಯೋಗ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅನ್ವಯ ಅತ್ಯಂತ ಗಂಭೀರ ಅಧಿಕೃತ ಕ್ರಿಮಿನಲ್ ಅಪರಾಧವಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

"ರಾಜ್ಯಮಟ್ಟದಲ್ಲಿ ಗೌರವಾನ್ವಿತ ಸ್ಥಾನದಲ್ಲಿದ್ದ ಮಾಜಿ ಶಾಸಕರಾದ ಶ್ರೀ ಶಿವನಗೌಡ ನಾಯಕ್ ಕೆ. ಅವರಿಗೆ ನವಿಲು ಗರಿಯಿಂದ ತಯಾರಿಸಲಾದ ಹಾರವನ್ನು ಕಾರ್ಯಕ್ರಮವೊಂದರಲ್ಲಿ ಹಾಕಿದ ದೃಶ್ಯಗಳು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಬಹಳ ವೇಗವಾಗಿ ಹರಡುತ್ತಿದ್ದು, ಸಾರ್ವಜನಿಕ ಮತ್ತು ವನ್ಯಜೀವಿ ಸಂರಕ್ಷಣಾ ಕಾರ್ಯಕರ್ತರ ನಡುವೆ ತೀವ್ರ ಆತಂಕ ಮೂಡಿಸಿರುವಂತಹ ಘಟನೆಯಾಗಿದೆ. ಈ ದೃಶ್ಯಗಳಲ್ಲಿ ನವಿಲು ಗರಿಯನ್ನು ಹಾರವಾಗಿ ವಿನ್ಯಾಸಗೊಳಿಸಿ. ಅದನ್ನು ಮಾಜಿ ಶಾಸಕರಿಗೆ ಗೌರವ ಸೂಚಕವಾಗಿ ಧರಿಸುತ್ತಿರುವುದನ್ನು ಸ್ಪಷ್ಟವಾಗಿ ಕಾಣಬಹುದು.

ಈ ಕೃತ್ಯವು ಕೇವಲ ನೈತಿಕ ದೋಷವಷ್ಟೇ ಅಲ್ಲ, ಬದಲಾಗಿ ನವಿಲು ಎಂಬ ರಾಷ್ಟ್ರಪಕ್ಷಿಯ ಅಂಗವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವ ಮೂಲಕ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972' ರ many 'Scheduled-l ನಿಯಮ provisions ಅನ್ನು ಉಲ್ಲಂಘಿಸಿರುವ ಗಂಭೀರ ಅಪರಾಧವಾಗಿದೆ. ಇಂತಹ ಕಾರ್ಯಗಳು ಸಾರ್ವಜನಿಕರಲ್ಲಿ ತಪ್ಪು ಸಂದೇಶವನ್ನು ಹರಡುತ್ತದ್ದಲ್ಲದೆ. ಇತರರು ಕೂಡಾ ಇದೇ ರೀತಿಯ ಕೃತ್ಯಗಳಿಗೆ ಪ್ರೇರಿತರಾಗುವ ಅಪಾಯವಿದೆ. ತಕ್ಷಣ ತನಿಖೆ ಆರಂಭಿಸಿ. ನವಿಲು ಗರಿಯ ಮೂಲವನ್ನು ಪತ್ತೆಹಚ್ಚಿ. ಮಾದರಿ ವಶಪಡಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು. ಸಂಬಂಧಪಟ್ಟ ಎಲ್ಲಾ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿ, ಕ್ರಮಬದ್ಧವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ. ಮತ್ತು ಈ ಅಪರಾಧಕ್ಕೆ ತಕ್ಕಂತೆ ವೈಜ್ಞಾನಿಕ ಹಾಗೂ ಕಾನೂನಾತ್ಮಕ ದೃಷ್ಟಿಯಿಂದ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X