ನಾಳೆ (ಮೇ15) ಸಿಂಧನೂರು–ರಾಯಚೂರು ನಡುವೆ ಹೊಸ ರೈಲ್ವೆ ಮಾರ್ಗಕ್ಕೆ ಶಂಕುಸ್ಥಾಪನೆ

ಸಾಂದರ್ಭಿಕ ಚಿತ್ರ
ರಾಯಚೂರು : ಸಿಂಧನೂರು– ರಾಯಚೂರು ನಡುವೆ 81 ಕಿ.ಮೀ ನೂತನ ರೈಲು ಮಾರ್ಗ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮವು ಮೇ 15 ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲೆಯ ಸಿಂಧನೂರು ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಭಾರತ ಸರ್ಕಾರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಹಾಗೂ ರಾಜ್ಯ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಡಾ.ಎಂ.ಬಿ.ಪಾಟೀಲ್ ಅವರು ಉದ್ಘಾಟಿಸಲಿದ್ದಾರೆ.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ಶಾಸಕರಾದ ಬಸವರಾಜ ರಾಯರೆಡ್ಡಿ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಘನ ಉಪಸ್ಥಿತಿ ವಹಿಸುವರು.
ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ಚಂದ್ರಶೇಖರ್ ಬಿ.ಪಾಟೀಲ್, ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ ಅವರು ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಹುಬ್ಬಳ್ಳಿಯ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ದೂರವಾಣಿ ಸಂಖ್ಯೆ : 0836-2360747 ಅಥವಾ 0836-2363494 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.







