Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಜ್ಯ ಸರಕಾರವು ರೈತರು, ಕೂಲಿ ಕಾರ್ಮಿಕರು...

ರಾಜ್ಯ ಸರಕಾರವು ರೈತರು, ಕೂಲಿ ಕಾರ್ಮಿಕರು ಹಾಗೂ ಬಡವರ ಪರವಾಗಿದೆ : ಜಿ.ಪರಮೇಶ್ವರ್

ಉಪಮುಖ್ಯಮಂತ್ರಿಗಳಿಂದ ರಾಯಚೂರು ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ8 Oct 2026 3:16 PM IST
share
ರಾಜ್ಯ ಸರಕಾರವು ರೈತರು, ಕೂಲಿ ಕಾರ್ಮಿಕರು ಹಾಗೂ ಬಡವರ ಪರವಾಗಿದೆ : ಜಿ.ಪರಮೇಶ್ವರ್

ರಾಯಚೂರು : ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಗುರುವಾರ ರಾಯಚೂರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಅನಾವೃಷ್ಟಿಯಿಂದ ತೀವ್ರವಾಗಿ ಬಾಧಿಸಿರುವ ಬರ ಪರಿಸ್ಥಿತಿಯ ನೇರ ವೀಕ್ಷಣೆ ಮತ್ತು ಬೆಳೆ ಹಾನಿ ಪರಿಶೀಲನೆ ನಡೆಸಿದರು.

ಕೊಪ್ಪಳ ಜಿಲ್ಲೆಯಿಂದ ಆಗಮಿಸಿ, ಮೊದಲಿಗೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಊಮಲೂಟಿ ಗ್ರಾಮದ ಊಮಲೂಟಿ ಸೀಮಾಂತರ ಬೀರಮಲ್ಲಪ್ಪ ಅವರ ಸರ್ವೇ ನಂಬರ್ 92ರಲ್ಲಿ ಸುಮಾರು 20 ಎಕರೆಯಷ್ಟು ತೊಗರಿ ಬೆಳೆಹಾನಿಯ ಹೊಲವನ್ನು ವೀಕ್ಷಣೆ ಮಾಡಿದರು.

ನಂತರ ಕಮಲಂಗಿ ಗ್ರಾಮದ ಸೆರ್ವೇ ನಂಬರ್ 14ರ ನಾಗಮ್ಮ ಗಂಡ ಶರಣೆಗೌಡ ಅವರ ಹೊಲಕ್ಕೆ ಭೇಟಿ ನೀಡಿ, ತೊಗರಿ ಬೆಳೆಯನ್ನು ವೀಕ್ಷಣೆ ಮಾಡಿದರು.

ಈ ವೇಳೆ ಡಾ. ಜಿ. ಪರಮೇಶ್ವರ್ ಅವರು ರೈತರೊಂದಿಗೆ ಮಾತನಾಡಿ, ರಾಜ್ಯದ 240 ತಾಲೂಕುಗಳಲ್ಲಿ ಈಗಾಗಲೇ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಉಳಿದ ತಾಲೂಕುಗಳೂ ಸಹ ಬರಗಾಲದ ಭೀತಿಯಲ್ಲಿವೆ. ಕರಾವಳಿ ಭಾಗದ ನಾಲ್ಕರಿಂದ ಐದು ತಾಲ್ಲೂಕುಗಳನ್ನು ಹೊರತುಪಡಿಸಿ ಇಡೀ ರಾಜ್ಯವೇ ಇಂದು ಬರಗಾಲದಲ್ಲಿದೆ. ಮಳೆಯಿಲ್ಲದೆ ಮಣ್ಣು ಸಂಪೂರ್ಣವಾಗಿ ಒಣಗಿ ಸುಡುತ್ತಿದ್ದು, ರೈತರು ಬಿತ್ತಿದ ಎಲ್ಲಾ ಬೆಳೆಗಳು ನಾಶವಾಗಿವೆ. 125 ವರ್ಷಗಳ ಹಿಂದೆ ಇಂತಹ ಭೀಕರ ಬರಗಾಲ ಬಂದಿತ್ತು ಎಂದು ಹೇಳಿದರು.

ರಾಜ್ಯದ ರೈತ ಆರ್ಥಿಕ ಶಕ್ತಿಯಾಗಿದ್ದು, ಪ್ರಸ್ತುತ ಅವನು ತೀವ್ರ ಕಷ್ಟದಲ್ಲಿದ್ದಾನೆ. ಬ್ಯಾಂಕ್ ಹಾಗೂ ಇತರೆಡೆ ಸಾಲ ಮಾಡಿ ಬಿತ್ತನೆ ಮಾಡಿದ್ದ ರೈತರಿಗೆ ಈಗ ಕೈಯಲ್ಲಿ ಯಾವುದೇ ಫಸಲು ಸಿಗದೆ ಸಂಕಷ್ಟ ಎದುರಾಗಿದೆ. ರಾಜ್ಯ ಸರ್ಕಾರವು ರೈತರು ಮತ್ತು ಕೂಲಿ ಕಾರ್ಮಿಕರ ಪರವಾಗಿದೆ. ಕಳೆದ ಜೂನ್ ತಿಂಗಳಿನಲ್ಲೇ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿ ಪರಿಸ್ಥಿತಿಯ ಪರಾಮರ್ಶೆ ನಡೆಸಲಾಗಿದೆ. ಅಲ್ಲದೆ ವಿಧಾನ ಸೌಧದಲ್ಲಿ ವಿರೋಧ ಪಕ್ಷಗಳೊಂದಿಗೆ ಚರ್ಚಿಸಲು ನಾಲ್ಕು ದಿನಗಳ ಕಾಲ ವಿಶೇಷ ಅಧಿವೇಶನವನ್ನು ಸಹ ಕರೆಯಲಾಗಿತ್ತು ಎಂದರು.

ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಈಗಾಗಲೇ 306 ಕೋಟಿ ರೂಪಾಯಿಗಳನ್ನು ರಾಜ್ಯದ ವಿವಿಧ ಕ್ಷೇತ್ರಗಳಿಗೆ ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ ಜಾನುವಾರುಗಳಿಗೆ ಮೇವು ಮತ್ತು ಮೇವಿನ ಕಿಟ್ ಒದಗಿಸಲು 25 ಕೋಟಿ ರೂಪಾಯಿಗಳನ್ನು ಜಿಲ್ಲಾಧಿಕಾರಿಗಳ ಮುಖಾಂತರ ಮೇವು ಬ್ಯಾಂಕ್‌ಗಳಿಗೆ ನೀಡಲಾಗಿದೆ ಎಂದರು.

ನಾಲ್ಕು ಕ್ವಿಂಟಲ್ ತೊಗರಿ ಬಿತ್ತನೆ ಮಾಡಲಾಗಿದ್ದು, ಸರಿಯಾದ ಸಮಯಕ್ಕೆ ಮಳೆ ಬಾರದೆ ಬಿತ್ತನೆ ಮಾಡಿದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಎಕರೆಗೆ 50 ಸಾವಿರ ರೂ.ಗಳನ್ನು ಸರ್ಕಾರದ ವತಿಯಿಂದ ಪರಿಹಾರ ನೀಡಿ, ರೈತರಿಗೆ ಅನುಕೂಲ ಮಾಡಬೇಕು ಎಂದು ಊಮಲೂಟಿ ‌ಗ್ರಾಮದ ಹೊಲದ ಮಾಲೀಕನಾದ ಭೀರಮಲ್ಲಪ್ಪ ಮನವಿ ಮಾಡಿದರು.

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಶಾಸಕರಾದ ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ಸಹಾಯಕ‌ ಆಯುಕ್ತರಾದ ನಾಗೇಂದ್ರ ಬಾಬು ಕುಮಾರ್, ಡಾ.ಹಂಪಣ್ಣ ಸಜ್ಜನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌವ್ಹಾಣ್, ತಹಶಿಲ್ದಾರ್ ಅರುಣ್ ಕುಮಾರ್ ದೇಸಾಯಿ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು .

Tags

G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X