Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ...

ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು: ಸಚಿವ ಕೆ.ಎಚ್. ಮುನಿಯಪ್ಪ

ಹೊಕ್ರಾಣಿ ಗ್ರಾಮಕ್ಕೆ ಭೇಟಿ; ಅಶ್ವಿನಿ ಕುಟುಂಬ ಸಾಂತ್ವನ

ವಾರ್ತಾಭಾರತಿವಾರ್ತಾಭಾರತಿ4 Sept 2026 8:19 PM IST
share
ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು: ಸಚಿವ ಕೆ.ಎಚ್. ಮುನಿಯಪ್ಪ

ರಾಯಚೂರು: ಸಮಾಜದಲ್ಲಿ ಪ್ರೀತಿ-ವಾತ್ಸಲ್ಯದಿಂದ ಒಟ್ಟಾಗಿ ಬಾಳುವ ಉತ್ತಮ ವಾತಾವರಣವನ್ನು ಗ್ರಾಮೀಣ ಭಾಗದಲ್ಲಿ ನಿರ್ಮಿಸಬೇಕು. ಅಶಾಂತಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಹೇಳಿದರು.

ಸೆಪ್ಟೆಂಬರ್ 04ರ ಶುಕ್ರವಾರ ದಂದು ‌ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಮೃತ ಅಶ್ವಿನಿ ಅವರ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಮಾತನಾಡಿದರು.

ಈ ಹಿಂದುಳಿದ ಪ್ರದೇಶಗಳಲ್ಲಿ ವಿಶೇಷ ಕಾಳಜಿ ವಹಿಸಿ, ಅಲ್ಲಿನ ಪರಿಸ್ಥಿತಿಯನ್ನು ಸುಧಾರಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ಕಾರದ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಸಮುದಾಯಗಳ ಮಧ್ಯ ಉತ್ತಮ ವಾತಾವರಣ ನಿರ್ಮಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಒಟ್ಟಾಗಿ ಶ್ರಮಿಸಬೇಕು. ಮೃತ ಅಶ್ವಿನಿ ಅವರ ಕುಟುಂಬಕ್ಕೆ ಸರ್ಕಾರದಿಂದ ಅಗತ್ಯ ನೆರವು ನೀಡಲಾಗುತ್ತದೆ. ಅಲ್ಲದೆ ಅವರ ಸಹೋದರನಿಗೆ ಸರ್ಕಾರಿ ನೌಕರಿ ನೀಡಲಾಗುತ್ತದೆ. ಹಾಗೂ ಅವರ ಜಮೀನಿಗೆ ನೀರಾವರಿ ವ್ಯವಸ್ಥೆ ಮಾಡಲು ಸೂಕ್ತ ‌ವ್ಯವಸ್ಥೆ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ‌ಸಚಿವರು ನಿರ್ದೇಶನ ನೀಡಿದರು.

ಹೊಕ್ರಾಣಿ ಗ್ರಾಮದಲ್ಲಿ ನಡೆದ ಅಶ್ವಿನಿ ಕೊಲೆ ಖಂಡಿಸಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು ದ್ವೇಷ-ಅಸೂಯೆಗಳನ್ನು ಮರೆತು, ಎಲ್ಲರೂ ಸಾಮರಸ್ಯದಿಂದ ಬದುಕು ನಡೆಸುವ ಮೂಲಕ ಮುನ್ನಡೆಯಬೇಕು. ಎಲ್ಲಿ ನಾವು ಪ್ರೀತಿ-ವಾತ್ಸಲ್ಯದ ಬದುಕನ್ನು ಮಾಡಿಕೊಂಡು ಹೋಗುತ್ತೇವೆಯೋ, ಅಲ್ಲಿ ಮಾತ್ರ ನಾವು ಮುಂದೆ ಹೋಗಲು ನಮಗೆ ಅವಕಾಶವಿದೆ ಎಂದರು.

ಸಾಮರಸ್ಯವನ್ನು ಮೂಡಿಸುವುದಕ್ಕಾಗಿ 41 ವರ್ಷಗಳಿಂದ ನಿರಂತರ ಹೋರಾಟದಲ್ಲೇ ಇದ್ದೇವೆ. ಎಲ್ಲಿಯವರೆಗೆ ನಮ್ಮಲ್ಲಿ ಸಾಮರಸ್ಯ ಮೂಡುವುದಿಲ್ಲವೋ, ಅಲ್ಲಿಯವರೆಗೆ ನಮ್ಮ ನಾಡಿನಲ್ಲಿ ಅಭಿವೃದ್ಧಿ ಹಾಗೂ ಶಾಂತಿ ನೆಲೆಸುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ಸಮಾಜದ ಎಲ್ಲರೂ ಒಂದಾಗಿ ಕೈಜೋಡಿಸಬೇಕೆಂದು ಸಚಿವರು ಕರೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರತಿ ವಾರ ತಾಲೂಕು ಮಟ್ಟದಲ್ಲಿ ಸಿಇಒ ಹಾಗೂ ಎಸ್.ಪಿ‌ ಒಳಗೊಂಡಂತೆ ವಿವಿಧ ಗ್ರಾಮಗಳಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭೇಟಿ ನೀಡಿ, ಸರ್ಕಾರದ ವಿವಿಧ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಹಾಲಿ‌ ವಿಧಾನ ಪರಿಷತ್ ಸದಸ್ಯರಾದ‌ ಎನ್.ಎಸ್.ಭೋಸರಾಜು, ಮಾನ್ವಿ ಶಾಸಕ ಹಂಪಯ್ಯ ನಾಯಕ, ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಕೆ.ಪಿ. ಮೋಹನ್ ರಾಜ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರಾಕೇಶ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ಸಮಾಜ ಕಲ್ಯಾಣ ಇಲಾಖೆಯ ಉಪ‌ ನಿರ್ದೇಶಕ ಕೃಷ್ಣ ಶಾವಂತಗೇರ ಸೇರಿದಂತೆ ವಿವಿಧ ಇಲಾಖೆಯ ‌ಅಧಿಕಾರಿಗಳು, ವಿವಿಧ ಸಂಘಟನೆಯ ‌ಮುಖಂಡರು ಹಾಗೂ ಹೊಕ್ರಾಣಿ ಗ್ರಾಮಸ್ಥರು ಇದ್ದರು.

Tags

K. H. MuniyappaRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X