ರಾಯಚೂರಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ : ಜನಜೀವನ ಅಸ್ತವ್ಯಸ್ತ

ಸಾಂದರ್ಭಿಕ ಚಿತ್ರ
ರಾಯಚೂರು: ತೆಲಂಗಾಣ ಹಾಗೂ ಉತ್ತರ ಒಳನಾಡಿನಾದ್ಯಂತ ಕಡಿಮೆ ಒತ್ತಡ ಪ್ರದೇಶ ಉಂಟಾಗಿದ್ದರಿಂದ ಕಳೆದ ಎರಡು ದಿನಗಳಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಹವಾಮಾನ ಇಲಾಖೆಯ ಪ್ರಕಾರ ಇನ್ನೂ ಮೂರು ದಿನ ರಾಯಚೂರು ಜಿಲ್ಲೆ ಸೇರಿ ಕಲ್ಯಾಣ ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ಮಧ್ಯಮ, ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರೈತರು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿರಂತರವಾಗಿ ಮಳೆ ಬರುವ ಕಾರಣ ಕೃಷ್ಣ ಹಾಗೂ ತುಂಗಭದ್ರಾ ನದಿಗಳಿಗೆ ಡ್ಯಾಂ ಮೂಲಕ ನೀರು ಬಿಡಲಾಗುತ್ತಿದ್ದು, ನದಿ ತೀರದ ಗ್ರಾಮಸ್ಥರು ನದಿ ದಂಡೆಗೆ ಹೋಗಬಾರದು ಹಾಗೂ ಜಾನುವಾರುಗಳಿಗೆ ನದಿ ತಟದಲ್ಲಿ ಮೇಯಲು ಬಿಡಬಾರದು ಎಂದು ಜಿಲ್ಲಾಡಳಿತ ಹಾಗೂ ತಹಶಿಲ್ದಾರರು ಆಯಾ ತಾಲೂಕು ವ್ಯಾಪ್ತಿಯ ಜನರಿಗೆ ಎಚ್ಚರಿಕೆ ನೀಡಿದ್ದಾರೆ.
Next Story





