Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕೃಷ್ಣಾ ನದಿಯ ಒಳ ಹರಿವು ಹೆಚ್ಚಳ: ನದಿ...

ಕೃಷ್ಣಾ ನದಿಯ ಒಳ ಹರಿವು ಹೆಚ್ಚಳ: ನದಿ ಪಾತ್ರದ ಗ್ರಾಮಸ್ಥರಿಗೆ ವಿಶೇಷ ಸೂಚನೆ

ವಾರ್ತಾಭಾರತಿವಾರ್ತಾಭಾರತಿ30 May 2025 11:13 AM IST
share
ಕೃಷ್ಣಾ ನದಿಯ ಒಳ ಹರಿವು ಹೆಚ್ಚಳ: ನದಿ ಪಾತ್ರದ ಗ್ರಾಮಸ್ಥರಿಗೆ ವಿಶೇಷ ಸೂಚನೆ

ರಾಯಚೂರು: ಮುಂಗಾರು ಹಂಗಾಮಿನ 2025-26ನೇ ಸಾಲಿನಲ್ಲಿ ಮಹಾರಾಷ್ಟ ರಾಜ್ಯದಲ್ಲಿ ಜಾಸ್ತಿ ಮಳೆಯಾಗಿರುವುದರಿಂದ ಸೊನ್ನ ಬ್ಯಾರಜದಿಂದ ಭೀಮಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುತ್ತಿರುವುದರಿಂದ ಕೃಷ್ಣಾ ನದಿಗೆ ಅತೀ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ಹೆಚ್ಚಾಗಿದ್ದು, ರಾಯಚೂರು ತಾಲೂಕಿನ ಕೃಷ್ಣಾ ನದಿ ಪಾತ್ರದ ಗ್ರಾಮಗಳ ಸಾರ್ವಜನಿಕರು ಅಗತ್ಯ ಎಚ್ಚರ ವಹಿಸುವಂತೆ ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ ಅವರು ತಿಳಿಸಿದ್ದಾರೆ.

ಕೃಷ್ಣ ನದಿಗೆ ನೀರು ಬಿಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ರಾಯಚೂರು ತಾಲೂಕಿನ ಕೃಷ್ಣಾ ನದಿ ಪಾತ್ರದ ಗ್ರಾಮಗಳಾದ ಬುರ್ದಿಪಾಡ, ಗುರ್ಜಾಪೂರು, ಕೊರ್ತಕುಂದಾ, ಕುರ್ವಕುಲಾ, ಅಗ್ರಹಾರ, ಕುರ್ವಕುರ್ದಾ, ಅತ್ತೂರು, ದೇವಸೂಗೂರು, ಗಂಜಳ್ಳಿ, ಕಾಡೂರು, ಕರೆಕಲ್, ಡಿ.ರಾಂಪೂರು, ಅರಷಣಗಿ, ಮಾಮಡದೊಡ್ಡಿ, ಮಂಗಿಗಡ್ಡ, ರಾಲದೊಡ್ಡಿ, ಕೊರ್ವಿಹಾಳ ಗ್ರಾಮಗಳ ಗ್ರಾಮಸ್ಥರು ಯಾವುದೇ ಕಾರಣಕ್ಕೂ ನದಿಯ ಪಾತ್ರಕ್ಕೆ ತೆರಳಬಾರದು. ಅಲ್ಲದೆ ಸಾವರ್ಜನಿಕರು ತಮ್ಮ ದನ-ಕರುಗಳನ್ನು ನದಿಗೆ ತೆರಳದಂತೆ ನೋಡಿಕೊಳ್ಳುವುದು. ರಭಸವಾಗಿ ಬರುವ ನೀರಿನ ಜೊತೆಗೆ ಮೊಸಳೆಗಳು ಬರುವುದರಿಂದ ಪ್ರಾಣ ಹಾನಿಯಾಗುವ ಸಾಧ್ಯತೆ ಇರುವುದರಿಂದ ಎಚ್ಚರ ವಹಿಸಬೇಕು.

ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅಳವಡಿಸಿರುವ ಪಂಪಸೆಟ್‌ಗಳನ್ನು ಯಾವುದೇ ಅಹಿತಕರ ಘಟನೆಗಳು ಜರಗದಂತೆ ನದಿ ಪಾತ್ರದಿಂದ ಹೊರತೆಗೆಯುವುದು. ರೈತರು ಯಾವುದೇ ಸಾವು-ನೋವುಗಳು ಸಂಭವಿಸದಂತೆ ಪ್ರವಾಹದ ಮುನ್ಸೂಚನೆಯಂತೆ ಕ್ರಮ ಕೈಗೊಳ್ಳಬೇಕು.

ಕೃಷ್ಣಾ ನದಿಪಾತ್ರದ ನಡುಗಡ್ಡೆಗಳಾದ ಕುರ್ವಕುರ್ದಾ ಮತ್ತು ನಾರಗಡ್ಡೆ ಗ್ರಾಮದ ಸಾರ್ವಜನಿಕರು ಪ್ರವಾಹದ ಸಂದರ್ಭದಲ್ಲಿ ರಸ್ತೆ ಸಂಪರ್ಕ, ದೂರವಾಣಿ ಸಂಪರ್ಕ ಕಡಿತಗೊಳ್ಳುವುದರಿಂದ ಜೀವಹಾನಿ, ಪ್ರಾಣಹಾನಿ ಆಗದಂತೆ ಮುಂಜಾಗ್ರತ ಕ್ರಮವಾಗಿ ಆಹಾರ, ಔಷಧಿ, ಸಾಮಗ್ರಿಗಳನ್ನು ಶೇಖರಣೆ ಮಾಡಿಕೊಳ್ಳಬೇಕು. ಹಾಗೂ ವಯೋವೃದ್ಧರು, ದೀರ್ಘ ಕಾಯಿಲೆಯಿಂದ ಬಳುತ್ತಿರುವವರು ವಯಸ್ಕರು ಮತ್ತು ಮಕ್ಕಳು, ಗರ್ಭೀಣಿಯರು ಸುರಕ್ಷಿತವಾದ ಸ್ಥಳಗಳಿಗೆ ತೆರಳಬೇಕು ಎಂದು ರಾಯಚೂರು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಯಚೂರು: ಕೃಷ್ಣಾ ನದಿಯ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಗುರ್ಜಾಪುರ ಬ್ಯಾರೇಜ್‌ನ ಗೇಟ್ ಓಪನ್ ಮಾಡಲಾಗಿದೆ. ಸದ್ಯ ಮುಂಗಾರು ಅಬ್ಬರ ಜೋರಾಗಿರುವುದರಿಂದ ಆಲಮಟ್ಟಿ, ಬಸವಸಾಗರ ಜಲಾಶಯಗಳಿಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಕೃಷ್ಣಾ ನದಿಗೆ ನೀರು ಹರಿಬಿಡುವ ಸಾಧ್ಯತೆಯಿದ್ದು, ನದಿ ಪಾತ್ರದಲ್ಲಿ ಜಿಲ್ಲಾಡಳಿತ ಅಲರ್ಟ್ ಆಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ರಾಯಚೂರು ತಾಲೂಕಿನ ಗುರ್ಜಾಪುರ ಬ್ಯಾರೇಜ್‌ನ ಗೇಟ್‌ಗಳನ್ನ ತೆರೆಯಲಾಗುತ್ತಿದೆ. 1.5 ಟಿಎಂಸಿ ಸಾಮರ್ಥ್ಯದ ಬ್ಯಾರೇಜ್‌ನ್ನು ಆರ್‌ಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ನೀರನ್ನು ಒದಗಿಸಲು ನಿರ್ಮಿಸಲಾಗಿದೆ. ಇಲ್ಲಿನ 194 ಗೇಟ್‌ಗಳನ್ನ ತೆರೆದು ನೀರನ್ನ ಹರಿಬಿಡಲು ಕೆಬಿಜೆಎಲ್‌ಎಲ್ ಅಧಿಕಾರಿಗಳು ಮುಂದಾಗಿದ್ದಾರೆ.

ಕ್ರೇನ್ ಮೂಲಕ ಒಂದೊಂದೇ ಗೇಟ್‌ಗಳನ್ನ ತೆರೆಯಲಾಗುತ್ತಿದೆ. ಈ ಹಿಂದೆ ನದಿಗೆ ನೀರು ಬಿಟ್ಟಾಗ ಗೇಟ್‌ಗಳು ಓಪನ್ ಆಗದೇ ಸಮಸ್ಯೆ ಉಂಟಾಗಿತ್ತು. ಈ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ನದಿಗೆ ನೀರು ಹರಿಸುವ ಮೊದಲೇ ಗೇಟ್‌ಗಳನ್ನ ತೆರೆಯಲಾಗುತ್ತಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X