Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ನಿಜಾಮರ ಕಾಲದ ಕುಡಿಯುವ ನೀರಿನ ಪೈಪ್‌ಲೈನ್...

ನಿಜಾಮರ ಕಾಲದ ಕುಡಿಯುವ ನೀರಿನ ಪೈಪ್‌ಲೈನ್ ಪರಿಶೀಲಿಸಿ ಅಪ್‌ಗ್ರೇಡ್ ಮಾಡಿ : ಸಚಿವ ಯತೀಂದ್ರ ಸಿದ್ದರಾಮಯ್ಯ

ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ7 Sept 2026 2:22 PM IST
share
ನಿಜಾಮರ ಕಾಲದ ಕುಡಿಯುವ ನೀರಿನ ಪೈಪ್‌ಲೈನ್ ಪರಿಶೀಲಿಸಿ ಅಪ್‌ಗ್ರೇಡ್ ಮಾಡಿ : ಸಚಿವ ಯತೀಂದ್ರ ಸಿದ್ದರಾಮಯ್ಯ

ರಾಯಚೂರು : ಹೈದರಾಬಾದ್ ನಿಜಾಮರ ಕಾಲದಲ್ಲಿ ಅಳವಡಿಸಲಾದ ಕುಡಿಯುವ ನೀರಿನ ಪೈಪ್‌ಲೈನ್‌ಗಳಿಗೆ ಹಲವು ವರ್ಷಗಳಾಗಿರುವುದರಿಂದ ಅವುಗಳನ್ನು ಪರಿಶೀಲಿಸಿ ಅಗತ್ಯವಿದ್ದಲ್ಲಿ ನವೀಕರಣ (ಅಪ್‌ಗ್ರೇಡ್) ಮಾಡಬೇಕು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು.

ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಯಚೂರು ನಗರದ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೂಲಸೌಕರ್ಯಗಳನ್ನೂ ಅದಕ್ಕೆ ಅನುಗುಣವಾಗಿ ವಿಸ್ತರಿಸಬೇಕಾಗಿದೆ ಎಂದರು.

ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ನೀರಿನ ಲಭ್ಯತೆ ಇದ್ದರೂ ನಗರದಲ್ಲಿ 24x7 ಕುಡಿಯುವ ನೀರು ಪೂರೈಕೆ ಆಗಬೇಕಾಗಿತ್ತು. ಈಗಿರುವ ಸಮಸ್ಯೆಗಳನ್ನು ಸರಿಪಡಿಸಿ ನಗರದ ಎಲ್ಲ ಬಡಾವಣೆಗಳಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.

ಕೆಲವು ಬಡಾವಣೆಗಳಲ್ಲಿ ಪೈಪ್‌ಲೈನ್ ಇದ್ದರೂ ಸಮರ್ಪಕವಾಗಿ ನೀರು ತಲುಪುತ್ತಿಲ್ಲ ಎಂಬ ದೂರುಗಳು ಬಂದಿವೆ. ಅಂತಹ ಪ್ರದೇಶಗಳಲ್ಲಿ ಹೊಸ ಕಾಮಗಾರಿಗಳನ್ನು ಕೈಗೊಂಡು ಎಲ್ಲರಿಗೂ ಸಮಾನವಾಗಿ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು ಎಂದು ಹೇಳಿದರು.

ಅನುದಾನ ಸಮರ್ಪಕ ಬಳಕೆಗೆ ಸೂಚನೆ :

ಮಹಾತ್ಮ ಗಾಂಧಿ ರಾಷ್ಟ್ರೀಯ ನಗರ ವಿಕಾಸ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ಅನುದಾನದ ಕೊರತೆ ಇದ್ದರೆ ಕ್ರಿಯಾ ಯೋಜನೆ (ಆ್ಯಕ್ಷನ್ ಪ್ಲಾನ್) ಸಲ್ಲಿಸಿದರೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಕೆರೆಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ :

ಸಭೆಯಲ್ಲಿ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ಮಾತನಾಡಿ, ನಗರ ವಿಕಾಸ ಯೋಜನೆಯಡಿ ಆಶ್ರಯ ಕಾಲೊನಿ, ಕುಲಸುಂಬಿ ಕಾಲೊನಿ ಸೇರಿದಂತೆ ವಿವಿಧ ಕೊಳಗೇರಿ ಬಡಾವಣೆಗಳಲ್ಲಿ ರಸ್ತೆ, ವಿದ್ಯುತ್ ದೀಪ, ಕುಡಿಯುವ ನೀರು ಹಾಗೂ ಇತರೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.

ಐತಿಹಾಸಿಕ ಮನ್ಸಲಾಪುರ ಕೆರೆ ಮತ್ತು ನೀರಭಾವಿ ಕುಂಟಾ ಕೆರೆ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳ ಅನುದಾನದಿಂದ ಪೌರಕಾರ್ಮಿಕರಿಗೆ ಸಮವಸ್ತ್ರ, ವೈಯಕ್ತಿಕ ಶೌಚಾಲಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಮಾಜಿ ಸಚಿವ ಎನ್.ಎಸ್.ಬೋಸರಾಜು, ಎಂಎಲ್‌ಸಿ ವಸಂತ ಕುಮಾರ,ಶಾಸಕ ದದ್ದಲ್ ಬಸನಗೌಡ ಮಾತನಾಡಿದರು.

Tags

Yathindra SiddaramaiahwaterNizam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X