ರಾಯಚೂರು ಪಾಲಿಕೆಯ ಪ್ರಭಾರಿ ಆಯುಕ್ತರಾಗಿ ಈಶ್ವರ ಕುಮಾರ ಕಾಂದೂ ನೇಮಕ

ರಾಯಚೂರು: ರಾಯಚೂರು ಮಹಾನಗರ ಪಾಲಿಕೆಯ ಪ್ರಭಾರಿ ಆಯುಕ್ತರಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ಯಾದಗಿರಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ತಾತ್ಕಾಲಿಕವಾಗಿ ಈಶ್ವರ ಕುಮಾರ ಕಾಂದೂ ಅವರನ್ನು ನೇಮಕ ಮಾಡಲಾಗಿದೆ.
Next Story




