Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಆರ್ಥಿಕವಾಗಿ ಸಬಲರಾಗಿರುವವರು ಬಡವರ...

ಆರ್ಥಿಕವಾಗಿ ಸಬಲರಾಗಿರುವವರು ಬಡವರ ನೆರವಿಗೆ ಧಾವಿಸುವುದು ಸಾಮಾಜಿಕ ಜವಾಬ್ದಾರಿ : ಸಚಿವ ಸತೀಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ18 Jan 2026 7:32 PM IST
share
ಆರ್ಥಿಕವಾಗಿ ಸಬಲರಾಗಿರುವವರು ಬಡವರ ನೆರವಿಗೆ ಧಾವಿಸುವುದು ಸಾಮಾಜಿಕ ಜವಾಬ್ದಾರಿ : ಸಚಿವ ಸತೀಶ್ ಜಾರಕಿಹೊಳಿ
► "ಅಕ್ಬರ್ ಪಾಷಾ ಅವರಿಂದ ಪ್ರತಿ ವರ್ಷ ಸಾಮೂಹಿಕ‌ ವಿವಾಹ ನಡೆಯಲಿ" ► ದಾರುಸ್ಸಲಾಮ್ ಫೌಂಡೇಶನ್ ವತಿಯಿಂದ 121 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ

ರಾಯಚೂರು : ಆರ್ಥಿಕವಾಗಿ ಸಬಲರಾಗಿರುವವರು ಬಡವರ ನೆರವಿಗೆ ಧಾವಿಸುವುದು ಸಾಮಾಜಿಕ ಜವಾಬ್ದಾರಿಯಾಗಿದೆ. ಅಕ್ಬರ್ ಪಾಷಾ ಅವರು ತಮ್ಮ ಪುತ್ರನ ಮದುವೆಯ ಸಂದರ್ಭದಲ್ಲಿ 121 ಜೋಡಿಗಳಿಗೆ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸುವ ಮೂಲಕ ರಾಜ್ಯಕ್ಕೆ ಆದರ್ಶಪ್ರಾಯವಾಗಿದ್ದಾರೆ. ಅಕ್ಬರ್ ಪಾಷಾ ಅವರಿಂದ ಪ್ರತಿ ವರ್ಷ ಸಾಮೂಹಿಕ‌ ವಿವಾಹ ನಡೆಯಲಿ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಮಾನ್ವಿಯ ಪ್ರಥಮ ದರ್ಜೆ ಗುತ್ತಿಗೆದಾರ ಹಾಗೂ ದಾರುಸ್ಸಲಾಮ್ ಫೌಂಡೇಶನ್ ಅಧ್ಯಕ್ಷ ಸೈಯದ್ ಅಕ್ಬರ್ ಹುಸೇನಿ (ಅಕ್ಬರ್ ಪಾಷಾ) ಅವರು ತಮ್ಮ ಪುತ್ರನ ಮದುವೆ ಅಂಗವಾಗಿ ಮಾನ್ವಿ ಪಟ್ಟಣದ ಅಕ್ಬರಿಯ ಮಸೀದಿ ಬಳಿ ಆಯೋಜಿಸಿದ್ದ ಮುಸ್ಲಿಂ ಸಮುದಾಯದ 121 ಜೋಡಿಗಳ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜವನ್ನು ಹಣದಿಂದ ಬದಲಾಯಿಸಲು ಸಾಧ್ಯವಿಲ್ಲ. ಒಳ್ಳೆಯ ವಿಚಾರಗಳ ಮೂಲಕ ಬದಲಾಯಿಸಬೇಕು. ಇದಕ್ಕೆ ಈ ಕಾರ್ಯಕ್ರಮ ಪೂರಕವಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗೆ ನಮ್ಮ ಸರ್ಕಾರದ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಅನೇಕ ಯೋಜನೆಗಳ ಮೂಲಕ‌ ನೆರವಾಗುತ್ತಿದೆ. ಅಲ್ಪಸಂಖ್ಯಾತರ ಪರವಾಗಿ ನಮ್ಮ ಸರ್ಕಾರ ಸದಾ ಇರುತ್ತದೆ ಎಂದರು.

ಇಂದಿನ ಕಾಲದಲ್ಲಿ ದುಂದುವೆಚ್ಚದ ಮದುವೆಗಳು ಹೆಚ್ಚಾಗುತ್ತಿದ್ದು, ಸರಳ ವಿವಾಹಗಳ ಸಂಖ್ಯೆ ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ 121 ಜೋಡಿಗಳ ಮದುವೆ ಮಾಡಿಸಿರುವ ಅಕ್ಬರ್ ಪಾಷಾ ಅವರು ರಾಜ್ಯಕ್ಕೆ ಹೊಸ ಸಂದೇಶ ಕೊಟ್ಟಿದ್ದಾರೆ. ನೂತನ ವಧು-ವರರು 'ನಾವಿಬ್ಬರು ನಮಗಿಬ್ಬರು' ಎಂಬ ಧ್ಯೇಯದೊಂದಿಗೆ ಕುಟುಂಬ ಯೋಜನೆಯನ್ನು ಅಳವಡಿಸಿಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದರು.

ಮಾಜಿ ಸಚಿವ ಕೆ.ಶಿವನಗೌಡ ನಾಯಕ ಮಾತನಾಡಿ, ನಾನು ಈ‌ ಹಿಂದೆ ಸಾಮೂಹಿಕ ವಿವಾಹ ಮಾಡಿಸಿದ್ದೆ‌. ಆದರೆ, 11ಜೋಡಿಗಳನ್ನು ವಿವಾಹ ಮಾಡಿಸಲು ಹೆಣಗಾಡಿದ್ದೇನೆ. ಅಕ್ಬರ್ ಪಾಷಾ ಅವರು 121 ಜೋಡಿಗಳ ವಿವಾಹ ಮಾಡಿಸಿದ್ದು ದಾಖಲೆಯಾಗಿದೆ. ಅಕ್ಬರ್ ಪಾಷಾ ಅವರು ತಮ್ಮ ಸಂಪಾದನೆಯಲ್ಲಿ ಶೇ. 90ರಷ್ಟು ಹಣವನ್ನು ಬಡವರಿಗಾಗಿಯೇ ವ್ಯಯಿಸುವ ಅಪರೂಪದ ವ್ಯಕ್ತಿ. ಸರ್ಕಾರದಿಂದಲೇ ಪಿಂಚಣಿ ನೀಡಲು ವಿಳಂಬವಾಗುವ ಈ ಕಾಲದಲ್ಲಿ, ಪ್ರತಿ ತಿಂಗಳ 1ನೇ ತಾರೀಖಿನಂದು ನೂರಾರು ನಿರ್ಗತಿಕರಿಗೆ ಸ್ವಂತ ಹಣದಿಂದ ಪಿಂಚಣಿ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಕೋವಿಡ್ ಸಂದರ್ಭದಲ್ಲಿ ಉಚಿತ ಆಂಬುಲೆನ್ಸ್ ಸೇವೆ, ರಮಝಾನ್ ವೇಳೆ ಮಸೀದಿಗಳಿಗೆ ಏರ್ ಕೂಲರ್‌ಗಳ ವಿತರಣೆ ಸೇರಿದಂತೆ ಅನೇಕ ಕೆಲಸಗಳನ್ನು ಅಕ್ಬರ್ ಪಾಷಾ ಅವರು ಯಾವುದೇ ಪ್ರಚಾರ ಬಯಸದೆ ಮಾಡಿದ್ದಾರೆ. ಬಲಗೈ ನೀಡಿದ ದಾನ ಎಡಗೈಗೆ ತಿಳಿಯಬಾರದು ಎಂಬ ಸಂಪ್ರದಾಯವನ್ನು ಇವರು ಅಕ್ಷರಶಃ ಪಾಲಿಸುತ್ತಿದ್ದಾರೆ. 121 ಜೋಡಿಗಳ ಮದುವೆ ಮಾಡಿಸಿದ ಇವರಿಗೆ, ಮುಂದೆ 1021 ಜೋಡಿಗಳ ವಿವಾಹ ನೆರವೇರಿಸುವ ಶಕ್ತಿಯನ್ನು ದೇವರು ಕರುಣಿಸಲಿ," ಎಂದು ಶಿವನಗೌಡ ನಾಯಕ ಹಾರೈಸಿದರು.

Tags

Satish Jarkiholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X