Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕನಿಷ್ಟ ಬೆಂಬಲ ಬೆಲೆ ಕಾನೂನು ಬದ್ದವಾಗಿ...

ಕನಿಷ್ಟ ಬೆಂಬಲ ಬೆಲೆ ಕಾನೂನು ಬದ್ದವಾಗಿ ಜಾರಿಯಾಗಬೇಕು: ಕೋಡಿಹಳ್ಳಿ ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ23 Dec 2025 8:01 PM IST
share
ಕನಿಷ್ಟ ಬೆಂಬಲ ಬೆಲೆ ಕಾನೂನು ಬದ್ದವಾಗಿ ಜಾರಿಯಾಗಬೇಕು: ಕೋಡಿಹಳ್ಳಿ ಚಂದ್ರಶೇಖರ್

ಸಿಂಧನೂರು: ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕಾದರೆ ಕನಿಷ್ಟ ಬೆಂಬಲ ಬೆಲೆಯನ್ನು ಕಾನೂನು ಬದ್ದವಾಗಿ ಜಾರಿಗೆಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಆಗ್ರಹಿಸಿದ್ದಾರೆ.

ನಗರದ ಎಪಿಎಂಸಿ ಆವರಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ, ಜೈ ಜವಾನ ಜೈ ಕಿಸಾನ ಸೇವಾ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ವಿಶ್ವ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಎಂಎಸ್‍ಪಿ ಜಾರಿಯಾದರೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಸಂದರ್ಭದಲ್ಲಿ ಸರಕಾರವೇ ರೈತರ ಉತ್ಪನ್ನಗಳನ್ನು ಖರೀದಿ ಮಾಡುತ್ತದೆ. ಇದರಿಂದ ರೈತರಿಗೆ ಕನಿಷ್ಟ ಬೆಲೆಯಾದರೂ ಸಿಗಲಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಸರಕಾರದ ವಿರುದ್ದ ಜನಾಂದೋಲನ ರೂಪಿಸಬೇಕು ಎಂದು ಹೇಳಿದರು.

ತುಂಗಭದ್ರಾ ಈ ಭಾಗದ ಜೀವನಾಡಿ. ಸುಮಾರು 32 ಟಿಎಂಸಿಯಷ್ಟು ಹೂಳು ತುಂಬಿದ್ದರಿಂದ ನೀರಿನ ಸಮಸ್ಯೆ ಎದುರಾಗುತ್ತದೆ. ಸರಕಾರ ಈ ಬಗ್ಗೆ ಗಂಭೀರ ಚಿಂತನೆ ಮಾಡುವ ಅಗತ್ಯವಿದೆ. ಹೂಳೆ ತೆಗೆಸಬೇಕು. ಇಲ್ಲಿದಿದ್ದರೆ ನವಲಿ ಸಮನಾಂತರ ಜಲಾಶಯ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಎಲ್ಲಾ ವಸ್ತುಗಳ ಬೆಲೆಯನ್ನು ಉತ್ಪಾದಕರು ನಿರ್ಧರಿಸುತ್ತಾರೆ. ಆದರೆ ರೈತರು ಬೆಳೆದ ಬೆಳೆಗಳಿಗೆ ಮಾತ್ರ ಬೆಲೆಯನ್ನು ವರ್ತಕರು ನಿರ್ಧರಿಸುತ್ತಾರೆ. ಬೆಲೆಯಿಲ್ಲದೇ ಅನ್ನದಾತನ ಬದುಕು ದುಸ್ತರವಾಗಿದೆ. ಯಾವುದೇ ಸರಕಾರಗಳು ಬಂದರೂ ರೈತರಿಗೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ. ರೈತಪರ ಸಂಘಟನೆಗಳು ಹೆಚ್ಚು ಬಲಗೊಳ್ಳಬೇಕಿದೆ ಎಂದು ಹೇಳಿದರು.

ಈ ವೇಳೆ ರಂಭಾಪುರಿ ಕಾಸಾಶಾಖಾಮಠದ ಸೋಮನಾಥ ಶಿವಾಚಾರ್ಯರು ಮಾತನಾಡಿದರು. ತುರ್ವಿಹಾಳ ಅಮೋಘ ಸಿದ್ದೇಶ್ವರಮಠದ ಮಾದಯ್ಯ ಗುರುವಿನ್, ಬಂಗಾರಿ ಕ್ಯಾಂಪಿನ ಶರಣರು ಸಾನಿಧ್ಯ ವಹಿಸಿದ್ದರು. ಬಸವರಾಜ ಗೋಡಿಹಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರ್‍ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಬಿಜೆಪಿ ಮುಖಂಡ ರಾಜೇಶ ಹಿರೇಮಠ, ತಿಮ್ಮಣ್ಣ ಸಾಹುಕಾರ, ಕೆಪಿಸಿಸಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನಾಗವೇಣಿ ಪಾಟೀಲ್, ಮಹಾದೇವಮ್ಮ, ಸುವರ್ಣ ಹಿರೇಮಠ, ಸಿಪಿಐಎಂನ ಎಂ.ಗಂಗಾಧರ, ಬಸವರಾಜ ಗೊರೇಬಾಳ, ಪರಶುರಾಮ, ರವಿಕುಮಾರ್‌, ವೀರೇಶ ದಿದ್ದಿಗಿ, ನಾರಾಯಣ ಬೆಳಗುರ್ಕಿ, ಸಿದ್ದನಗೌಡ ಗೋನವಾರ, ಮಾಳಪ್ಪ ಪೂಜಾರಿ, ದೊಡ್ಡನಗೌಡ ಕಲ್ಲೂರು, ಹನುಮಂತಪ್ಪ ಗೋಡಿಹಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X