ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಈಡಿ ದಾಳಿ; ಮಾನವ ಬಂಧುತ್ವ ವೇದಿಕೆಯ ಲಾಲ್ ಪೀರ್ ಖಂಡನೆ

ಲಾಲ್ ಪೀರ್
ಲಿಂಗಸುಗೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಈಡಿ) ದಾಳಿ ರಾಜಕೀಯ ಪ್ರೇರಿತವಾಗಿದೆ. ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾನವ ಬಂಧುತ್ವ ವೇದಿಕೆ ಲಿಂಗಸುಗೂರು ತಾಲೂಕು ಘಟಕಸ ಮುಖಂಡ ಲಾಲ್ ಪೀರ್ ಖಂಡಿಸಿದರು.
ಅವರು ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ, ಸತೀಶ್ ಜಾರಕಿಹೊಳಿ ಅವರು ಸರಳ, ಸಜ್ಜನಿಕೆಯ ರಾಜಕಾರಣಿ, ಜನ ನಾಯಕ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕರಾಗಿದ್ದಾರೆ. ಕೇವಲ ಅವರು ಕೇವಲ ವಾಲ್ಮೀಕಿ ನಾಯಕ ಸಮಾಜಕ್ಕೆ ಸೀಮಿತರಾಗದೇ ಅಹಿಂದ ಸಮಾಜಕ್ಕಾಗಿ ದುಡಿದಿದ್ದಾರೆ. ಅವರ ಏಳಿಗೆಯನ್ನು ಸಹಿಸದೇ ಈಡಿ ಮೂಲಕ ಬೆದರಿಸುವ ಕೆಲಸ ಮಾಡಲಾಗುತ್ತಿದ್ದು ಸರಿಯಲ್ಲ ಎಂದು ದೂರಿದರು.
ಅಹಿಂದ ನಾಯಕನನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆದಿದ್ದು, ಇದನ್ನು ನಾವು ಸಹಿಸುವುದಿಲ್ಲ. ಸತೀಶ್ ಜಾರಕಿಹೊಳಿ ಅವರು ಅನವ ಬಂಧುತ್ವದ ಮೂಲಕ ಸಮಾಜದಲ್ಲಿ ಮೂಢನಂಬಿಕೆ, ಕಂದಾಚಾರಗಳ ಬಗ್ಗೆ ಜಾಗೃತಿ ಮೂಡಿಸಿ ವೈಜ್ಞಾನಿಕ ಚಿಂತನೆಗೆ ಕಾರಣರಾಗಿದ್ದಾರೆ. ಬಡ, ಮಧ್ಯಮ ವರ್ಗದ ಸೇವಕರಾಗಿ ಗುರುತಿಸಿಕೊಂಡಿದ್ದಾರೆ. ಇಂತಹ ಜನ ನಾಯಕನನ್ನು ಗುರಿಯಾಗಿಸಿ ದಾಳಿ ಮಾಡಿಸುತ್ತಿದ್ದು ಖಂಡನಾರ್ಹ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಸಿಬಿಐ, ಈಡಿ, ಚುನಾವಣೆ ಆಯೋಗ ಸೇರಿ ಇತರೆ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.






