ಲಿಂಗಸುಗೂರು: ಆರೆಸ್ಸೆಸ್ ಪಥಸಂಚಲನದಲ್ಲಿ ಭಾಗಿಯಾದ ಪಿಡಿಒ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ರಾಯಚೂರು: ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ( ಪಿ.ಎ) ಹಾಗೂ ಪಿಡಿಒ ಆಗಿರುವ ಪ್ರವೀಣ ಕುಮಾರ. ಕೆ, ಇತ್ತೀಚೆಗೆ ನಡೆದ ಆರ್ ಎಸ್ಎಸ್ ಪಥ ಸಂಚಲನದಲ್ಲಿ ಭಾಗವಹಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಬಗ್ಗೆ ವರದಿಯಾಗಿದೆ.
ಸರ್ಕಾರಿ ಅಧಿಕಾರಿ ಆಗಿರುವ ಪ್ರವೀಣ ಕುಮಾರ. ಕೆ ಅವರು ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಶಾಸಕ ಮಾನಪ್ಪ ವಜ್ಜಲ್ ಅವರೊಂದಿಗೆ ಸಂಘದ ಸಮವಸ್ತ್ರ ಧರಿಸಿ ಕೈಯಲ್ಲಿ ದೊಣ್ಣೆ ಹಿಡಿದು ಭಾಗವಹಿಸುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಠಿ ಮಾಡಿದ್ದಲ್ಲದೇ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ವಿಭಜಕ ಶಕ್ತಿಗಳ ಜೊತೆ ಕೈಜೋಡಿಸಿರುವ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ, ಪಂಚಾಯತ್ ರಾಜ್ ಸಚಿವರಿಗೆ ಕಾರ್ಮಿಕ ಸಂಘಟನೆಯ ಮುಖಂಡ ಹೆಚ್ ಎಂ ಬಾಬು ಮನವಿ ಮಾಡಿದ್ದಾರೆ.
Next Story





