Lingsugur | ವಿದ್ಯಾರ್ಥಿ ನಿಗೂಢ ಸಾವು; ಮೂವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು : ತಾಲೂಕಿನ ಗುಂಡಸಾಗರದ 15 ವರ್ಷದ ವಿದ್ಯಾರ್ಥಿ ಕಾರ್ತಿಕ್ ಬಸವರಾಜ ಸೂಡಿ ಎಂಬಾತ ನಿಗೂಢವಾಗಿ ಮೃತಪಟ್ಟಿದ್ದು, ಈ ಸಂಬಂಧ ಅದೇ ಗ್ರಾಮದ ಮೂವರ ವಿರುದ್ಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
"ರವಿವಾರ ಮದುವೆ ಕಾರ್ಯಕ್ರಮವೊಂದರಲ್ಲಿ ಊಟ ಮುಗಿಸಿದ್ದ ಕಾರ್ತಿಕ್, ಲಿಂಗಸುಗೂರಿಗೆ ಹೋಗಿ ಬರುವುದಾಗಿ ತಿಳಿಸಿದ್ದ. ಆದರೆ, ಕಾರ್ತಿಕ್‌ನನ್ನು ಆತನ ಮೂವರು ಗೆಳೆಯರು ಮೋಟಾರ್ ಸೈಕಲ್‌ನಲ್ಲಿ ಕರೆದೊಯ್ದು, ಆತನನ್ನು ಕೊಲೆ ಮಾಡಿ, ಮೃತದೇಹವನ್ನು ಕರಡಕಲ್ಲ ಕೆರೆ ಹತ್ತಿರ ಬಿಸಾಕಿದ್ದಾರೆ" ಎಂದು ದೂರಿನಲ್ಲಿ ಪಾಲಕರು ಆರೋಪಿಸಿದ್ದಾರೆ.
ಕಾರ್ತಿಕ್ ತಂದೆ ಬಸವರಾಜ ಅಮೀನಪ್ಪ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪಿಎಸ್‌ಐ ಗಂಗಪ್ಪ ಬುರ್ಲಿ ತನಿಖೆ ಕೈಗೆತ್ತಿಕೊಂಡಿದ್ದಾರೆ .
"ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದೇವೆ. ತನಿಖೆ ನಂತರ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ"
ಪೊಲೀಸ್ ವರಿಷ್ಠಾಧಿಕಾರಿಗಳು, ರಾಯಚೂರು
Next Story





