ಲಿಂಗಸುಗೂರು | ಅನ್ನದಾನ, ವಿಧ್ಯಾದಾನವು ಶ್ರೇಷ್ಠವಾದ ಕಾಯಕ : ಸಚಿವ ದರ್ಶನಾಪುರ

ಲಿಂಗಸುಗೂರು : ಅನ್ನದಾನ, ವಿಧ್ಯಾದಾನವು ಶ್ರೇಷ್ಠವಾದ ಕಾಯಕವಾಗಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರು ಅಭಿಪ್ರಾಯಪಟ್ಟರು.
ಲಿಂಗಸುಗೂರು ಪಟ್ಟಣದ ಬಸವೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ಬೆಳ್ಳಿ ಸಂಭ್ರಮ ಉದ್ಘಾಟಿಸಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಬಾಲಕರ ವಸತಿ ನಿಲಯ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸುವುದು ಸಣ್ಣ ಕೆಲಸವಲ್ಲ. ಮಠಮಾನ್ಯಗಳು ಹಾಗೂ ಸಂಘ ಸಂಸ್ಥೆಗಳಿಂದ ಬಡ ಮಕ್ಕಳು ವಿದ್ಯಾಭ್ಯಾಸ ಮಾಡಲು ಸಾಧ್ಯವಾಗಿದೆ. ಅಲ್ಲದೇ ದಕ್ಷಿಣ ಕರ್ನಾಟಕದ ವಿದ್ಯಾರ್ಥಿಗಳ ಜೊತೆ ಸ್ಪರ್ಧೆ ಮಾಡುವ ಶಕ್ತಿ ಈ ಭಾಗದ ವಿದ್ಯಾರ್ಥಿಗಳಲ್ಲಿದೆ. 3,500 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆಂದರೆ ಸಂಸ್ಥೆ ನೀಡುವ ಗುಣಮಟ್ಟದ ಶಿಕ್ಷಣದಿಂದಾಗಿದೆ ಎಂದರು.
ಶಾಸಕ ಮಾನಪ್ಪ ವಜ್ಜಲ್ ಮಾತನಾಡಿ, ಕಲ್ಯಾಣ ಕರ್ನಾಟಕದ ಅಭಿವೃಧ್ಧಿಗೆ ಶ್ರಮಿಸುವ ಕೆಲಸ ನಮ್ಮ ಭಾಗದ ಜನಪ್ರತಿನಿಧಿಗಳು ಶ್ರಮಿಸಬೇಕು. ದೊಡ್ಡ ಕೈಗಾರಿಕೆಗಳನ್ನು ಕಲ್ಯಾಣ ಕರ್ನಾಟಕದಲ್ಲಿ ಸ್ಥಾಪಿಸಿ ಯುವಕರಿಗೆ ಉದ್ಯೋಗ ಕೊಡುವಂತಹ ಕೆಲಸ ಮಾಡಬೇಕೆಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ, ಹಂಪಿ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಡಿ.ವಿ.ಪರಮಶಿವಮೂರ್ತಿ, ವಿಧಾನ ಪರಿಷತ್ ಸದಸ್ಯರುಗಳಾದ ಶರಣಗೌಡ ಪಾಟೀಲ್ ಬಯ್ಯಾಪುರ, ಶಶಿಲ್ ಜಿ.ನಮೋಶಿ, ಭೂಪನಗೌಡ ಕರಡಕಲ್, ಬಸವಂತರಾಯ ಕುರಿ, ಬಸವರಾಜ ಮೇಟಿ ಸೇರಿ ಗಣ್ಯರು ಶಿಕ್ಷಕರು ವಿಧ್ಯಾರ್ಥಿಗಳು ಸೇರಿ ಇತರರು ಇದ್ದರು.







