Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಲಿಂಗಸುಗೂರು | ಅಂಗನವಾಡಿ ನೌಕರರ ಬೇಡಿಕೆ...

ಲಿಂಗಸುಗೂರು | ಅಂಗನವಾಡಿ ನೌಕರರ ಬೇಡಿಕೆ ಈಡೇರಿಸಲು ಜು.10ರಂದು ಕಪ್ಪು ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ7 July 2026 9:01 PM IST
share
ಲಿಂಗಸುಗೂರು | ಅಂಗನವಾಡಿ ನೌಕರರ ಬೇಡಿಕೆ ಈಡೇರಿಸಲು ಜು.10ರಂದು ಕಪ್ಪು ದಿನಾಚರಣೆ

ಲಿಂಗಸುಗೂರು: ಅಂಗನವಾಡಿ ಹಾಗೂ ವಿವಿಧ ಯೋಜನೆಗಳ (ಸ್ಕೀಮ್) ನೌಕರರ ನ್ಯಾಯಸಮ್ಮತ ಬೇಡಿಕೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಮಾಡುತ್ತಿರುವುದನ್ನು ಖಂಡಿಸಿ ಜುಲೈ 10ರಂದು ರಾಜ್ಯಾದ್ಯಂತ ಕಪ್ಪು ದಿನಾಚರಣೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಸಿಐಟಿಯು ತಿಳಿಸಿವೆ.

ಸಂಘದ ನೇತೃತ್ವದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಐಸಿಡಿಎಸ್ ಯೋಜನೆಗೆ ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನವನ್ನು ಬೆಲೆ ಏರಿಕೆಗೆ ಅನುಗುಣವಾಗಿ ಹೆಚ್ಚಿಸದೆ ಯೋಜನೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಯಿಂದ 3ರಿಂದ 6 ವರ್ಷದ ಮಕ್ಕಳನ್ನು ಅಂಗನವಾಡಿಯಿಂದ ದೂರವಿಟ್ಟು ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಿಸುವ ಕ್ರಮವು ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಧಕ್ಕೆ ತರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಪೌಷ್ಟಿಕ ಆಹಾರದ ಘಟಕ ವೆಚ್ಚ ಹೆಚ್ಚಿಸದಿರುವುದು, ಪ್ಯಾಕೆಟ್ ಆಹಾರ ವಿತರಣೆಗೆ ಒತ್ತು ನೀಡುವುದು, ಎಫ್‌ಆರ್‌ಎಸ್, ಇ-ಕೆವೈಸಿ ಹಾಗೂ ಪೋಷಣ್ ಟ್ರ್ಯಾಕರ್ ಮೂಲಕ ಅನಗತ್ಯ ಒತ್ತಡ ಹೇರುವುದು ಮತ್ತು ಬಿಎಲ್‌ಒ ಸೇರಿದಂತೆ ಇಲಾಖೇತರ ಕೆಲಸಗಳನ್ನು ನೀಡುತ್ತಿರುವುದರಿಂದ ನೌಕರರ ಮೇಲೆ ಹೆಚ್ಚುವರಿ ಹೊರೆ ಬೀಳುತ್ತಿದೆ ಎಂದು ದೂರಿದರು.

ಚುನಾವಣಾ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 75 ಸಾವಿರ ರೂ. ಹಾಗೂ ಸಹಾಯಕಿಯರಿಗೆ 10 ಸಾವಿರ ರೂ. ಗೌರವಧನ ಜಾರಿಗೊಳಿಸಬೇಕು. ನೌಕರರನ್ನು ಖಾಯಂಗೊಳಿಸಿ ಕನಿಷ್ಠ ವೇತನ, ಪಿಂಚಣಿ, ಗ್ರಾಚ್ಯುಟಿ ಸೇರಿದಂತೆ ಸಾಮಾಜಿಕ ಭದ್ರತೆ ಒದಗಿಸಬೇಕು. ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಉತ್ತಮ ಗುಣಮಟ್ಟದ ಸ್ಥಳೀಯ ಪೌಷ್ಟಿಕ ಆಹಾರ, ಅಗತ್ಯ ಮೂಲಸೌಕರ್ಯ, ಡಿಜಿಟಲ್ ಸಾಧನಗಳು ಹಾಗೂ ಮೊಬೈಲ್-ಡೇಟಾ ವೆಚ್ಚ ಮರುಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.

Tags

Lingsugur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X