Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Lingsugur | ಸತೀಶ್ ಜಾರಕಿಹೊಳಿ ಮೇಲಿನ...

Lingsugur | ಸತೀಶ್ ಜಾರಕಿಹೊಳಿ ಮೇಲಿನ ಈಡಿ ದಾಳಿ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 Sept 2026 8:05 PM IST
share
Lingsugur | ಸತೀಶ್ ಜಾರಕಿಹೊಳಿ ಮೇಲಿನ ಈಡಿ ದಾಳಿ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಲಿಂಗಸುಗೂರು: ಸಚಿವ ಸತೀಶ ಜಾರಕಿಹೊಳಿ ಅವರ ಮೇಲಿನ ಜಾರಿ ನಿರ್ದೇಶನಾಲಯದ (ಈಡಿ) ದಾಳಿಯನ್ನು ಖಂಡಿಸಿ ಕಾಂಗ್ರೆಸ್, ಅಹಿಂದ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರ ಹಾಗೂ ತನಿಖಾ ಸಂಸ್ಥೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ, ಕಾಂಗ್ರೆಸ್‌ನ ಜನಪ್ರಿಯ ನಾಯಕರ ವಿರುದ್ಧ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಸಚಿವ ಸತೀಶ್‌ ಜಾರಕಿಹೊಳಿ ಅವರು ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ದೀನದಲಿತರು ಹಾಗೂ ಬಡವರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ವರ್ಚಸ್ಸಿಗೆ ಧಕ್ಕೆ ತರಲು ಇಂತಹ ದಾಳಿಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ಇದೇ ವೇಳೆ, ಈಡಿ ದಾಳಿಗೆ ಒಳಗಾದ ನಂತರ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರು. ಅದೇ ರೀತಿಯಲ್ಲಿ ಸತೀಶ ಜಾರಕಿಹೊಳಿ ಅವರೂ ಮುಂದೊಂದು ದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಅಭಿಪ್ರಾಯವನ್ನು ಶರಣಗೌಡ ಪಾಟೀಲ ವ್ಯಕ್ತಪಡಿಸಿದರು.

ಹಿರಿಯ ಕಾಂಗ್ರೆಸ್ ಮುಖಂಡ ಅಮರಗುಂಡಪ್ಪ ಮೇಟಿ ಮಾತನಾಡಿ, ಸತೀಶ್‌ ಜಾರಕಿಹೊಳಿ ಅವರು ಅನಾಥಾಶ್ರಮಗಳಿಗೆ ನೆರವು ನೀಡುತ್ತಿದ್ದು, ಪಾರದರ್ಶಕ ಆಡಳಿತಕ್ಕೆ ಒತ್ತು ನೀಡುತ್ತಿದ್ದಾರೆ. ಕಾಂಗ್ರೆಸ್‌ನ ಜನಪ್ರಿಯ ನಾಯಕರನ್ನು ತನಿಖಾ ಸಂಸ್ಥೆಗಳ ಮೂಲಕ ಬೆದರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಗ್ಯಾರಂಟಿ ಯೋಜನೆ ಜಿಲ್ಲಾ ಘಟಕದ ಅಧ್ಯಕ್ಷ ಪಾಮಯ್ಯ ಮುರಾರಿ ಮಾತನಾಡಿ, ಸತೀಶ್‌ ಜಾರಕಿಹೊಳಿ ಅವರು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿಯಾಗಿದ್ದು,ಈಡಿ ದಾಳಿಗೆ ಹೆದರುವ ಪ್ರಶ್ನೆಯೇ ಇಲ್ಲ. ಕಾನೂನು ಹೋರಾಟದ ಮೂಲಕ ಸತ್ಯ ಹೊರಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ ಮಾತನಾಡಿ, ಸತೀಶ್‌ ಜಾರಕಿಹೊಳಿ ಅವರ ಜನಪ್ರಿಯತೆಯನ್ನು ಸಹಿಸಲಾಗದೆ ಅವರ ವಿರುದ್ಧ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕರ ವಿರುದ್ಧ ರಾಜಕೀಯ ಪಿತೂರಿಯಿಂದ ದಾಳಿಗಳು ಮುಂದುವರಿದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಪಾಟೀಲ, ಡಿ.ಜಿ. ಗುರಿಕಾರ, ಗುಂಡಪ್ಪ ನಾಯಕ, ವೆಂಕಟೇಶ ಗುತ್ತೆದಾರ, ಅಮರೇಶ ಹೆಸರೂರು ಸೇರಿದಂತೆ ಕಾಂಗ್ರೆಸ್ ಮುಖಂಡರು, ದಲಿತ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

Satish JarkiholiED raidCongressprotestLingsugur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X