Lingsugur | ಎಸೆಸೆಲ್ಸಿ ಪರೀಕ್ಷೆ : ಗುಂತಗೋಳ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

ಲಿಂಗಸುಗೂರು : ತಾಲೂಕಿನ ಗುಂತಗೋಳ ಸರ್ಕಾರಿ ಪ್ರೌಢ ಶಾಲೆ ಈ ವರ್ಷದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿದ್ದು, ಶಾಲೆಗೆ ಹೆಮ್ಮೆ ತಂದಿದೆ ಎಂದು ಮುಖ್ಯೋಪಾಧ್ಯಾಯರಾದ ಗದ್ದೆಪ್ಪ ಈಚನಾಳ ತಿಳಿಸಿದ್ದಾರೆ.
ಶಾಲೆಯ ವಿದ್ಯಾರ್ಥಿನಿ ಶ್ರೀದೇವಿ (ತಂದೆ ಅಂಬಪ್ಪ) 90.88 ಶೇಕಡಾ ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಒಟ್ಟು 27 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಶಿಕ್ಷಕರ ಪರಿಶ್ರಮವೇ ಪ್ರಮುಖ ಕಾರಣವಾಗಿದೆ. ಹೆಚ್ಚುವರಿ ತರಬೇತಿ ಮತ್ತು ನಿರಂತರ ಮಾರ್ಗದರ್ಶನದ ಮೂಲಕ ಶಿಕ್ಷಕರು ವಿದ್ಯಾರ್ಥಿಗಳನ್ನು ಉತ್ತೇಜಿಸಿದ ಪರಿಣಾಮ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯೋಪಾಧ್ಯಾಯ ಗದ್ದೆಪ್ಪ ಎಚ್. ಸಿದ್ದಾಪೂರ (ಈಚನಾಳ) ಹಾಗೂ ಶಿಕ್ಷಕರ ತಂಡದ ಶ್ರಮವನ್ನು ಪಾಲಕರು ಶ್ಲಾಘಿಸಿದ್ದು, ವಿದ್ಯಾರ್ಥಿಗಳ ಸಾಧನೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ.
ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಿಕ್ಷಕರು, ಶಾಲಾ ಸಿಬ್ಬಂದಿ ಹಾಗೂ ಪಾಲಕರು ಶುಭಾಶಯ ಕೋರಿದ್ದಾರೆ.




