ಮುದುಗಲ್‌ನಲ್ಲಿ ಮಹರ್ಷಿ ವಾಲ್ಮೀಕಿ ನಾಮಫಲಕ ಕಿತ್ತ ಪ್ರಕರಣ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಲಿಂಗಸುಗೂರು: ಮುದುಗಲ್ ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ವೃತ್ತದ ಬಳಿ ನಾಮಫಲಕ ಕಿತ್ತುಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಅಧ್ಯಕ್ಷ ಆರ್.ಕೆ. ನಾಯಕ ಆಗ್ರಹಿಸಿದ್ದಾರೆ.
ಜುಲೈ 28ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ನಾಮಫಲಕ ತೆರವುಗೊಳಿಸಿದ ಘಟನೆಯ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಲಿಂಗಸುಗೂರು ಹಾಗೂ ಮುದುಗಲ್‌ನ ವಾಲ್ಮೀಕಿ ಸಮಾಜದ ಮುಖಂಡರು ಮತ್ತು ಯುವಕರು ಸೇರಿ ನಾಮಫಲಕ ಅಳವಡಿಸಲಾಗಿತ್ತು. ಜಗತ್ತಿಗೆ ರಾಮಾಯಣ ಬರೆದ ಶ್ರೀ ಮಹರ್ಷಿ ವಾಲ್ಮೀಕಿ ಅವರಿಗೆ ಅಪಮಾನ ಮಾಡುವುದರ ಮುಖಾಂತರ ರಾಜ್ಯದ ವಾಲ್ಮೀಕಿ ಸಮುದಾಯಕ್ಕೆ ಅವಮಾನ ಮಾಡಿದಂತಾಗಿದೆ. ಕೂಡಲೇ ಮಹರ್ಷಿ ವಾಲ್ಮೀಕಿ ಅವರಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ ಕಾನೂನಾತ್ಮಕ ಶಿಕ್ಷೆ ವಿಧಿಸಬೇಕು. ಒಂದು ವೇಳೆ ಆಗದೆ ಹೋದರೆ ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಹೋರಾಟ ಮಾಡಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story




