ಮಾನ್ವಿ | ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ʼಕಲ್ಯಾಣ ಕರ್ನಾಟಕ ನ್ಯಾಯಪೂರ್ಣ ಅಭಿವೃದ್ಧಿ ಜಾಥಾʼ

ಮಾನ್ವಿ : ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಹಿತದೃಷ್ಟಿಯಿಂದ ಈ ಭಾಗಕ್ಕೆ ವಿಶೇಷ ಕೈಗಾರಿಕಾ ನೀತಿ ರೂಪಿಸಬೇಕು ಮತ್ತು ಬಂಡವಾಳ ಹೂಡಿಕೆಯ ಪ್ರಮಾಣ ಹೆಚ್ಚಿಸಬೇಕು' ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ತಾಹಿರ್ ಹುಸೇನ್ ಒತ್ತಾಯಿಸಿದರು.
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಬಳ್ಳಾರಿಯಿಂದ ಕಲಬುರಗಿವರೆಗೆ ಹಮ್ಮಿಕೊಂಡಿರುವ ʼಕಲ್ಯಾಣ ಕರ್ನಾಟಕ ನ್ಯಾಯಪೂರ್ಣ ಅಭಿವೃದ್ಧಿ ಜಾಥಾʼ ಗುರುವಾರ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸ್ಥಳೀಯ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
'ಕಲ್ಯಾಣ ಕರ್ನಾಟ ಭಾಗಕ್ಕೆ 2013ರಲ್ಲಿ ವಿಶೇಷ ಸ್ಥಾನಮಾನ ದೊರೆತಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮೂಲಕ 12 ವರ್ಷಗಳಲ್ಲಿ 25 ಸಾವಿರ ಕೋಟಿ ರೂ. ಅನುದಾನ ರಾಜ್ಯ ಸರ್ಕಾರದಿಂದ ಬಿಡುಗಡೆಯಾದರೂ ಕೂಡ ಈ ಭಾಗದ 29 ತಾಲ್ಲೂಕುಗಳು ಅತ್ಯಂತ ಹಿಂದುಳಿದಿವೆ ಮತ್ತು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ದಿಯಾಗಿಲ್ಲ. ಆರೋಗ್ಯ, ಶಿಕ್ಷಣ, ಪೌಷ್ಠಿಕ ಆಹಾರ ಹಾಗೂ ಹಿಂದುಳಿದ, ಅಲ್ಪಸಂಖ್ಯಾತ, ದಲಿತ, ಅದಿವಾಸಿಗಳಿಗೆ ಸಾಮಾಜಿಕ ನ್ಯಾಯ ದೊರೆತಿಲ್ಲ. ರೈತರ ಸಮಸ್ಯೆಗಳಿಗೆ ಪರಿಹಾರ ದೊರೆತ್ತಿಲ್ಲ ಎಂದು ಹೇಳಿದರು.
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯ ಉಪಾಧ್ಯಕ್ಷ ಶ್ರೀಕಾಂತ್ ಸಾಲಿಯಾನ್, ರಾಜ್ಯ ಖಜಾಂಚಿ ಸಲಾಂ ಮಂಗಳೂರು, ವಲಯ ಕಾರ್ಯದರ್ಶಿ ಇರ್ಫಾನ್ ಬೀದರ್, ರಾಯಚೂರು ಜಿಲ್ಲಾ ಅಧ್ಯಕ್ಷ ಶೇಖ್ ಫರೀದ್ ಉಮರಿ, ತಾಲ್ಲೂಕು ಅಧ್ಯಕ್ಷ ಬಾಬಾ ಹುಸೇನ್ ಗಚ್ಚಿ, ರವೀಂದ್ರ ಜಾನೇಕಲ್ ,ಮಾರೆಪ್ಪ ಹರವಿ, ಶರಣುಕುಮಾರ ಮುದ್ದಂಗುಡ್ಡಿ, ಶರ್ಫುದ್ದೀನ್ ಪೋತ್ನಾಳ ,ಸುಭಾನ್ ಬೇಗ್, ಹನುಮಂತ ಕೋಟೆ, ಅಬ್ದುಲ್ ರೆಹಮಾನ್, ಕರಿಮ್ ಖಾನ್ ಸಾಬ್ , ಹುಸೇನ್ ಬಾಷಾ, ನಾಸಿರ್ ಅಲಿ, ಎಂ.ಎ.ಹೆಚ್. ಮುಕೀಮ್, ಸೈಯದ್ ಅಕ್ಬರ್ ಪಾಷಾ, ಅಬ್ದುಲ್ ಕರೀಂ ಖಾನ್ , ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಅಬ್ದುಲ್ ರಹಮಾನ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.







