ಮಾನ್ವಿ | ಮನೆ ಗೋಡೆ ಕುಸಿದು ಮಹಿಳೆ ಮೃತ್ಯು

ರಾಯಚೂರು: ಗುರುವಾರ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ಮಹಿಳೆಯೊರ್ವರು ಮೃತಪಟ್ಟಿರುವ ಘಟನೆ ಮಾನ್ವಿ ತಾಲ್ಲೂಕು ಕಾತರಕಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕಾತರಕಿ ಗ್ರಾಮದ ನಿವಾಸಿ ತಾಯಮ್ಮ ಗಂಡ ಬೆಂಕಿ ರಮೇಶ್ (35) ಎಂದು ಗುರುತಿಸಲಾಗಿದೆ.
ರಾತ್ರಿಯ ವೇಳೆ ಗಾಳಿ ಹಾಗೂ ಧಾರಾಕಾರ ಮಳೆ ಸುರಿದ್ದು, ಮನೆಯ ಗೋಡೆ ನೆನೆದಿದ್ದರಿಂದ ಗೋಡೆ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಮೃತ ಮಹಿಳೆಯ ಮಗಳು ಗಂಭೀರ ಗಾಯಗೊಂಡಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಶಾಸಕ ಹಂಪಯ್ಯ ಸಾಹುಕಾರ ಹಾಗೂ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





