ಮಾನ್ವಿ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ: ಕೊಲೆ ಶಂಕೆ

ಸಾಂದರ್ಭಿಕ ಚಿತ್ರ
ಮಾನ್ವಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊರ್ವ ಮೃತದೇಹ ತಾಲೂಕಿನ ಕಾತರಕಿ ಗ್ರಾಮದಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಪ್ರಕರಣವಾಗಿರುವ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಖಾಸಿಂಬೀ (26) ಎಂದು ಗುರುತಿಸಲಾಗಿದೆ.
ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಇತ್ತು ಎನ್ನಲಾಗಿದ್ದು, ಗಂಡನ ಮನೆಯವರೇ ಕೊಲೆ ಮಾಡಿರಬಹುದು ಎಂಬ ಅನುಮಾನಗಳು ವ್ಯಕ್ತವಾಗಿವೆ.
ಈ ಹಿನ್ನೆಲೆಯಲ್ಲಿ ಪತಿ ಸಣ್ಣ ಖಾಸಿಂ, ಪತಿಯ ಸಹೋದರ ದೊಡ್ಡ ಖಾಸಿಂ, ಮಾವ ಹಾಗೂ ಅತ್ತೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಪೈಕಿ ಸಣ್ಣ ಖಾಸಿಂ ಮತ್ತು ದೊಡ್ಡ ಖಾಸಿಂ ಅವರನ್ನು ಮಾನ್ವಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆಸುತ್ತಿದ್ದಾರೆ.
Next Story





