Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಎಸ್‌ಐಆರ್ ರದ್ದತಿಗೆ ಆಗ್ರಹಿಸಿ...

ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ರಾಯಚೂರಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

SIR ರದ್ದುಗೊಳಿಸುವವರೆಗೆ ಹೋರಾಟ: ಎನ್.ಎಸ್.ಬೋಸರಾಜು

ವಾರ್ತಾಭಾರತಿವಾರ್ತಾಭಾರತಿ5 Nov 2026 8:09 PM IST
share
ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ರಾಯಚೂರಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ರಾಯಚೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ, ‘ವೋಟ್ ಬಚಾವ್, ದೇಶ್ ಬಚಾವ್’ ಘೋಷವಾಕ್ಯದಡಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ, ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು.

ಈ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಅಣಕು ಪ್ರದರ್ಶನ ನಡೆಸಿ, ಘೋಷಣೆಗಳನ್ನು ಕೂಗುವ ಮೂಲಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಹಿಂದಿನ ಮತದಾರರ ಪಟ್ಟಿಯ ಆಧಾರದಲ್ಲಿಯೇ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಅಧಿಕಾರ ಪಡೆಯುವ ಉದ್ದೇಶದಿಂದ ಬಿಜೆಪಿ ಈ ಪ್ರಕ್ರಿಯೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ದೇಶಾದ್ಯಂತ ಸುಮಾರು 13 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಆರಂಭದಿಂದಲೂ ಮತಗಳ್ಳತನದ ವಿರುದ್ಧ ದೇಶಾದ್ಯಂತ ಧ್ವನಿ ಎತ್ತಿ ಹೋರಾಟ ನಡೆಸುತ್ತಿದ್ದರೂ ಚುನಾವಣಾ ಆಯೋಗ ಸ್ಪಂದಿಸುತ್ತಿಲ್ಲ. ಬದಲಾಗಿ ಬಿಜೆಪಿಯ ಅಣತಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ದೂರಿದರು.

ಈಗ ಮತದಾರರು ಜಾಗೃತರಾಗಿದ್ದು, ವಿವಿಧ ಸಂಘ-ಸಂಸ್ಥೆಗಳು ಹಾಗೂ ವಿರೋಧ ಪಕ್ಷಗಳ ಹೋರಾಟಕ್ಕೆ ಕೈಜೋಡಿಸುತ್ತಿದ್ದಾರೆ. ಇದರಿಂದ ಕೇಂದ್ರ ಸರ್ಕಾರಕ್ಕೆ ನಡುಕ ಶುರುವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಗಟ್ಟಿಯಾದ ಹೋರಾಟ ನಡೆಯಲಿದೆ. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಮತಗಳ್ಳತನದ ಕುರಿತು ಬಹಿರಂಗವಾಗಿ ಧ್ವನಿ ಎತ್ತುತ್ತಿದ್ದಾರೆ ಎಂದರು.

ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಯಬೇಕಾದರೆ ಈ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆ ರದ್ದುಗೊಳಿಸಬೇಕು. ಅಲ್ಲಿಯವರೆಗೆ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಶಾಂತಪ್ಪ, ಸರ್ವೋದಯ ಪಕ್ಷದ ರಾಜ್ಯ ಮುಖಂಡ ಚಾಮರಸ ಮಾಲಿ ಪಾಟೀಲ, ಕಾಂಗ್ರೆಸ್ ಮಾಧ್ಯಮ ವಕ್ತಾರ ಡಾ. ರಝಾಕ್ ಉಸ್ತಾದ್ ಮತ್ತಿತರರು ಮಾತನಾಡಿದರು.

ಪ್ರತಿಭಟನೆಯಲ್ಲಿ ಗ್ಯಾರಂಟಿ ಸಮಿತಿಯ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ, ಮುಖಂಡರಾದ ಜಯಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ರಾಮಣ್ಣ ಇರಬಗೇರಾ, ಅಸ್ಲಂ ಪಾಷಾ, ರುದ್ರಪ್ಪ ಅಂಗಡಿ, ಜಿ. ಶಿವಮೂರ್ತಿ, ರಾಜಶೇಖರ ನಾಯಕ, ಯೂಸೂಫ್ ಖಾನ್, ರಾಣಿ ರಿಚರ್ಡ್, ಗಿರಿಯಪ್ಪ ನೆಲಹಾಳ, ಕೆ. ಇ. ಕುಮಾರ, ವೆಂಕಟೇಶ, ಮಾರೆಪ್ಪ, ಜಿಂದಪ್ಪ, ವಿಶ್ವನಾಥ ಪಟ್ಟಿ, ನಿರ್ಮಲಾ ಬೆಣ್ಣೆ, ಶಶಿಕಲಾ ಭಿಮಾರಾಯ್, ಪ್ರತಿಭಾ ರೆಡ್ಡಿ ಹಾಗೂ ಯುವ ಕಾಂಗ್ರೆಸ್ ಮುಖಂಡರಾದ ಮುನಿಸ್ವಾಮಿ, ಫೈಸಲ್ ಖಾನ್ ಉಪಸ್ಥಿತರಿದ್ದರು.

Tags

SIRRaichurprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X