ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ

ರಾಯಚೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ ಸಮುದಾಯಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್,ಜೈನ್,ಬೌದ್ದ, ಸಿಖ್ ಮತ್ತು ಪಾರ್ಸಿ) ಸೇರಿದವರಾಗಿರಬೇಕು. ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 05 ಜೋಡಿಗಳು ಭಾಗವಹಿಸಿರತಕ್ಕದ್ದು. ಜಿಲ್ಲಾ ನೋಂದಣಿ/ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟಗಳು, ದೇವಸ್ಥಾನದ ಟ್ರಸ್ಟಗಳು, ಸಂಘಗಳು, ಸೊಸೈಟಿಗಳು ವಕ್ಫ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಈ ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 42 ವರ್ಷಗಳು, ವರನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಆಗಿರತಕ್ಕದ್ದು. ಈ ಯೋಜನೆಯಡಿ ಸಹಾಯಧನ ಬಯಸುವ ವಧು-ವರರ ವಾರ್ಷಿಕ ಆದಾಯ 5 ಲಕ್ಷ ರೂ.ಗಳನ್ನು ಮೀರಿರಬಾರದು.
ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ನಡೆಸಲಾಗುತ್ತಿದೆ. ಆದರೆ ತಾಂತ್ರಿಕ ಕಾರಣಗಳಿಂದ ಆನ್‌ಲೈನ್ ಅರ್ಜಿ ಸಲ್ಲಿಸಲು ತೊಂದರೆ ಉಂಟಾದಲ್ಲಿ ಅಂತಹ ಸಂದರ್ಭದಲ್ಲಿ ಮಾತ್ರ ಅನುಮೋದಿತ ಆಫ್‌ಲೈನ್ ಅರ್ಜಿ ನಮೂನೆಗಳನ್ನು ಜಿಲ್ಲಾ ಅಥವಾ ತಾಲೂಕು ಕಚೇರಿಯಿಂದ ಪಡೆದು ಸಲ್ಲಿಸಬಹುದಾಗಿದೆ.







