Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಶಾಸಕ ಬಸನಗೌಡ ದದ್ದಲ್ ಅವರಿಂದ ಗ್ರಾಮೀಣ...

ಶಾಸಕ ಬಸನಗೌಡ ದದ್ದಲ್ ಅವರಿಂದ ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ4 July 2026 12:55 PM IST
share
ಶಾಸಕ ಬಸನಗೌಡ ದದ್ದಲ್ ಅವರಿಂದ ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
ವಿದ್ಯಾರ್ಥಿಗಳು ಚೆನ್ನಾಗಿ ಓದಿ, ಸಮಾಜದಲ್ಲಿ ‌ಉನ್ನತ ಸ್ಥಾನಮಾನ ಪಡೆಯರಿ: ಶಾಸಕ ಬಸನಗೌಡ ದದ್ದಲ್

ರಾಯಚೂರು: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಶನಿವಾರ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶಾಸಕರ ಕಚೇರಿಯಿಂದ ಸಂಚಾರ ಆರಂಭಿಸಿದ ಅವರು, ಚಂದ್ರಬಂಡ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಡಗಂದೊಡ್ಡಿ ಗ್ರಾಮದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆರಂಭಿಸಲಾದ ನೂತನ ಬಸ್ ಸೇವೆಗೆ ಚಾಲನೆ ನೀಡಿದರು. ಈ ವೇಳೆ ವಿದ್ಯಾರ್ಥಿಗಳು ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಬೇಕು ಎಂದು ಕರೆ ನೀಡಿದರು.

ಬಳಿಕ ಚಂದ್ರಬಂಡದ ಡಿ. ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಆಹಾರ ವ್ಯವಸ್ಥೆ, ಮೂಲಸೌಕರ್ಯ, ಶುದ್ಧ ಕುಡಿಯುವ ನೀರು, ಅಡುಗೆಮನೆ ಹಾಗೂ ಗ್ರಂಥಾಲಯವನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಚಂದ್ರಬಂಡದಲ್ಲಿ ನೂತನ ರೈತರ ಸಂಪರ್ಕ ಕೇಂದ್ರ ಸ್ಥಾಪನೆಗೆ ಜಾಗ ಗುರುತಿಸಲಾಗಿದ್ದು, ಸರ್ವೆ ಪೂರ್ಣಗೊಂಡ ಬಳಿಕ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು.

ಕಟ್ಟಲಪೂರ ಕ್ರಾಸ್‌ನಿಂದ ತೆಲಂಗಾಣ ಗಡಿವರೆಗೆ ಸುಮಾರು 30 ಕಿ.ಮೀ ರಸ್ತೆ ನಿರ್ಮಾಣ ಕಾಮಗಾರಿ ₹14 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿರುವುದಾಗಿ ತಿಳಿಸಿದ ಅವರು, ಡಿ. ರಾಂಪೂರ ಸಂಪರ್ಕಿಸುವ ಕೃಷ್ಣಾ ನದಿ ಸೇತುವೆ ಕಾಮಗಾರಿ ಹಾಗೂ ಕುರ್ವಕಲಾ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿರುವ ದ್ವೀಪ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ನಾರದಗಡ್ಡೆಯನ್ನು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮೊಸಳೆ ಪಾರ್ಕ್ ನಿರ್ಮಾಣ ಸೇರಿದಂತೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಮಳೆ ಕೊರತೆಯ ಪರಿಸ್ಥಿತಿ ಮುಂದುವರಿದರೆ ಸರ್ಕಾರ ಬರ ಪರಿಹಾರ ಘೋಷಿಸಲಿದೆ. ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು. ಬೆಳೆ ಹಾನಿಯಾದಲ್ಲಿ ವಿಮಾ ಪರಿಹಾರ ಪಡೆಯಲು ಇದು ಸಹಕಾರಿಯಾಗಲಿದೆ ಎಂದು ರೈತರಿಗೆ ಸಲಹೆ ನೀಡಿದರು.

ಬಳಿಕ ನಾರದಗಡ್ಡೆಗೆ ಭೇಟಿ ನೀಡಿ, ನಾರದಸ್ವಾಮಿ ಮೂಲಸ್ಥಳದಲ್ಲಿ ದರ್ಶನ ಪಡೆದ ಅವರು, ಕೃಷ್ಣಾ ನದಿಯ ಸ್ನಾನಘಟ್ಟ ಕಾಮಗಾರಿಯನ್ನೂ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾಮಟ್ಟದ ಸಮಿತಿಯ ಉಪಾಧ್ಯಕ್ಷರಾದ ನಾಗೇಂದ್ರ ಮಟಮಾರಿ, ರಾಯಚೂರು ತಹಶಿಲ್ದಾರ್ ಸುರೇಶ್ ವರ್ಮಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಜಿ.ಸುರೇಶ್, ಪಿಡ್ಲೂಡಿ ಇಲಾಖೆಯ ಇಇ ಆನಂದ, ಮಹೇಶ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ದೀಪಾ ಕುಲಕರ್ಣಿ ಸೇರಿದಂತೆ ‌ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮುಖಂಡರು ಇದ್ದರು.

Tags

Basanagouda Daddal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X