ಕಾರ್ಮಿಕರು ಸರಕಾರದ ಸವಲತ್ತುಗಳನ್ನು ಸರಿಯಾಗಿ ಬಳಸಿಕೊಳ್ಳಲಿ: ಶಾಸಕ ಬಸನಗೌಡ ದದ್ದಲ್ ಸಲಹೆ

ರಾಯಚೂರು: ಕಾರ್ಮಿಕರು ಸರಕಾರದಿಂದ ಬರುವ ಸವಲತ್ತುಗಳನ್ನು ಸರಿಯಾಗಿ ಬಳಸಿಕೊಂಡು ಬದುಕನ್ನು ಉತ್ತಮವಾಗಿ ಕಟ್ಟಿಕೊಳ್ಳಬೇಕೆಂದು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.
ರಾಯಚೂರು ಗ್ರಾಮೀಣ ಕ್ಷೇತ್ರಕ್ಕೆ ಒಳಪಡುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಅರ್ಹ ಕಟ್ಟಡ ಮತ್ತು ಇತರ ನಿರ್ಮಾಣ ಕೆಲಸಗಳಾದ ಎಲೆಕ್ನಿಶಿಯನ್, ವೆಲ್ಡರ್, ಕಾರ್ಪೆಂಟರ್, ಪೆಂಟರ್ ಮತ್ತು ಪ್ಲಂಬರ್ ಕೆಲಸದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗೆ ವಿವಿಧ ಬಗೆಯ ಕಾರ್ಮಿಕರ ಸುರಕ್ಷತಾ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಶಾಸಕ ಬಸನಗೌಡ ದದ್ದಲ್, ದೇಶದ ಅಭಿವೃದ್ದಿಯಲ್ಲಿ ಕಾರ್ಮಿಕರ ಪಾತ್ರ ಅಷ್ಟೆ ಮಹತ್ವದ್ದಾಗಿದೆ. ದೇಶವು ಹೆಚ್ಚಿನ ಅಭಿವೃದ್ಧಿ ಕಾಣಬೇಕಾದರೆ ಕಾರ್ಮಿಕರ ಶ್ರಮ ಮುಖ್ಯ, ಕಾರ್ಮಿಕರ ಜೀವನ ಅತ್ಯಂತ ಕಷ್ಟಕರವಾಗಿದ್ದು, ಕೆಲಸ ಮಾಡುವಾಗ ಯಾವುದೇ ಸಂದರ್ಭದಲ್ಲಿ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಕಾರ್ಮಿಕರ ಕುಟುಂಬದ ರಕ್ಷಣೆಗಾಗಿ ಹಾಗೂ ಕಾರ್ಮಿಕರ ಏಳಿಗೆಗಾಗಿ ಕಾರ್ಮಿಕ ಇಲಾಖೆಯಿಂದ ಹಲವು ಯೋಜನೆಗಳನ್ನು ಜಾರಿ ಮಾಡಲಾಗಿದ್ದು, ನಾನಾ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಕಾರ್ಮಿಕರು ಇಲಾಖೆಯಲ್ಲಿ ಕಡ್ಡಾಯ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಈ ವೇಳೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಆರತಿ ಅವರು ಮಾತನಾಡಿ, ಕಾರ್ಮಿಕ ಇಲಾಖೆಯಿಂದ ನೀಡಲಾಗುವ ವಿವಿಧ ಯೋಜನೆಗಳ ಸದುಪಪಯೋಗ ಪಡೆದುಕೊಳ್ಳಲು ಎಲ್ಲಾ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಮಿಕರಿಗೆ ತಿಳವಳಿಕೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ನಿರೀಕ್ಷಕರಾದ ಪ್ರಿಯಾಂಕ ಸೇರಿದಂತೆ ಕಾರ್ಮಿಕ ಮುಖಂಡರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.





